ಪ್ರತಿಭಾನ್ವಿತ ವಿದ್ಯಾರ್ಥಿನಿ ಸೌಜನ್ಯ ರಾಘವೇಂದ್ರ ಪಾಲನಕರ್ಗೆ ಪ್ರತಿಭಾ ಪುರಸ್ಕಾರ

ಪ್ರತಿಭಾನ್ವಿತ ವಿದ್ಯಾರ್ಥಿನಿ ಸೌಜನ್ಯ ರಾಘವೇಂದ್ರ ಪಾಲನಕರ್ಗೆ ಪ್ರತಿಭಾ ಪುರಸ್ಕಾರ  Talent Award for talented student Sowjanya Raghavendra Palankar

ಲೋಕದರ್ಶನ ವರದಿ  

ಗದಗ, ಸೆ. 4: ಕರ್ನಾಟಕ ಸರ್ಕಾರದ ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗದಗ ಜಿಲ್ಲಾ ಗೊಲ್ಲ (ಯಾದವ) ಸಂಘದ ವತಿಯಿಂದ ಶ್ರೀಕೃಷ್ಣ ಜಯಂತ್ಯೋತ್ಸವದ ಪ್ರಯುಕ್ತ ಇಂದು (ಸೆ. 4) ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.  

ಗದಗ ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಶೇ. 88.16ರಷ್ಟು ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ ಶ್ರೀ ಸಿಡಿಒ ಜೈನ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಕುಮಾರಿ ಸೌಜನ್ಯ ರಾಘವೇಂದ್ರ ಪಾಲನಕರ್ ಅವರನ್ನು ಸನ್ಮಾನಿಸಿ, ಸ್ಮರಣಿಕೆ ಹಾಗೂ ಪ್ರಶಂಸನೀಯ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.  

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀ ಎಸ್‌.ವಿ. ಸಂಕನೂರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜನಾಬ್ ಅಕ್ಬರಸಾಬ್ ಬಬರ್ಚಿ, ಗದಗ ಜಿಲ್ಲಾಧಿಕಾರಿ ಶ್ರೀಧರ್ ಜೆ.ಕೆ.ಎನ್‌., ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್‌.ಕೆ.ಎನ್‌.,

ಗದಗ ಉಪವಿಭಾಗಾಧಿಕಾರಿ ದುರ್ಗೇಶ್ ವಿಭೂತಿ, ಲಕ್ಷ್ಮೇಶ್ವರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದಲಿಂಗೇಶ ಪಾಟೀಲ, ಕುರುಬ ಸಮಾಜದ ಮುಖಂಡರಾದ ಫಕೀರ​‍್ಪ ಹೇಬಸೂರ, ವೀರೇಶ್ ಪೂಜಾರ, ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪಾಲನಕರ್ ಸೇರಿದಂತೆ ಗದಗ ಜಿಲ್ಲಾ ಗೊಲ್ಲ ಸಮಾಜದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.  

ಸಮಾರಂಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಯಿತು.