ಮಂಗಳವಾರದಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Talent award ceremony on Tuesday- Nesaragi News
ನೇಸರಗಿ 01: ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಗಜಾನನ ಕಮೀಟಿ, ನೇಸರಗಿ ಹಾಗೂ ಗೆಳೆಯರ ಬಳಗ ನೇಸರಗಿ ಇವರ ಸಹಯೋಗದಲ್ಲಿ ಮಂಗಳವಾರ ದಿ. 2ರಂದು ಸಾಯಂಕಾಲ 6 ಗಂಟೆಗೆ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈಗಾಗಲೇ ಸ್ಪರ್ಧಾಳುಗಳು ತಮ್ಮ ತಮ್ಮ ಶಿಕ್ಷಣ ಸಂಸ್ಥೆಗಳಿಂದ ಹೆಸರುಗಳನ್ನು ನೊಂದಾಯಿಸಿರುತ್ತಾರೆ. ವಿಜೇತರಿಗೆ ಕೊಡಮಾಡುವ ನೆನಪಿನ ಕಾಣಿಕೆಗಳನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಭದ್ರ ಬ ಚೋಬಾರಿಯವರು ವಿತರಣೆ ಮಾಡಲಿದ್ದಾರೆ. ಪ್ರಶಸ್ತಿ ಪತ್ರಗಳನ್ನು ಮಹಾಂತೇಶ ವೀ ಕಟ್ಟಿಮನಿಯವರು ನೀಡಲಿದ್ದಾರೆ. ನೋಟ್ ಬುಕ್ ಮತ್ತು ಪೆನ್ನುಗಳನ್ನು ಭಾಗ್ಯವಂತಿ ಬುಕ್ ಸ್ಟಾಲನ ಮಾಲಿಕರಾದ ಅಡಿವೆಪ್ಪ ಕರವೀರನವರ ಹಾಗೂ ಪ್ರೇರಣಾದಾಯಕ ಪುಸ್ತಕಗಳನ್ನು ಮಹಮ್ಮದ್ ( ಪಪ್ಪು) ನದಾಫ - ಇವರುಗಳು ನೀಡಿರುತ್ತಾರೆ. ಗುರುಹಿರಿಯರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಸಕಾಲಕ್ಕೆ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂಬುದು ಸಂಘಟಕರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 