ಪಂಚಮಸಾಲಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಮೇಟಿ
ಲೋಕದರ್ಶನ ವರದಿ
ಕೊಪ್ಪಳ 16: ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮವನ್ನು ಜೂನ್ 30ರಂದು ಹಮ್ಮಿಕೊಳ್ಳಲಾಗಿದೆ. ಎಸ್ಎಸ್ಎಲ್ಸಿ ಯಲ್ಲಿ ಶೇ 80%, ಪಿಯುಸಿ ಯಲ್ಲಿ ಶೇ 75% ಅಂಕ ಪಡೆದ ಮಕ್ಕಳಿಂದ ಆರ್ಜಿ ಆಹ್ವಾನಿಸಲಿದ್ದು, ಎಸ್ಎಸ್ಎಲ್ ಅಥವಾ ಪಿಯುಸಿ ಅಂಕಪಟ್ಟಿ, ಆಧಾರ ಕಾರ್ಡ, 2 ಭಾವಚಿತ್ರಗಳ ನಿಗದಿತ ದಾಖಲೆಗಳೊಂದಿಗೆ ಜೂನ್ 25 ರ ಒಳಗಾಗಿ ತಹಶೀಲ ಕಛೇರಿ ಎದುರಿಗೆ ಇರುವ ವೀರರಾಣಿ ಕಿತ್ತೂರು ಚನ್ನಮ್ಮ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ, ಕೊಪ್ಪಳದಲ್ಲಿ ಅರ್ಜಿ ಯನ್ನು ಸಲ್ಲಿಸಿ ಸಮಾಜ ಬಾಂಧವರು ಪ್ರತಿಭಾ ಪುರಸ್ಕಾರದ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ತಾಲೂಕ ಅಧ್ಯಕ್ಷ ಕರಿಯಪ್ಪ ಮೇಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೋ: 9900362673, 9845581409, 9845716166, 9448634067, 9741263492 ಸಂಪರ್ಕಿಸಲು ಕೋರಲಾಗಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 