10 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿಭಾನ್ವೇಷಣೆ ಪರೀಕ್ಷೆ ಯಶಸ್ವಿ
Talent search exam successful for 10th grade students
ಗದಗ 28: ನಗರದ ಪ್ರತಿಷ್ಠಿತ ಸಂಸ್ಥೆಯಾದ ಆದಿಯೋಗಿ ಎಜುಕೇಷನಲ್ ಟ್ರಸ್ಟ್‌ನ ವತಿಯಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮೈಲಾರ್ಪ ಮೆಣಸಗಿ ಪಿಯು ಕಾಲೇಜಿನಲ್ಲಿ ನಡೆಸಿದ ಟ್ಯಾಲೆಂಟ್ ಹಂಟ್ ಪರೀಕ್ಷೆಯಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಬರವಣಿಗೆಯ ಮೂಲಕ ಅಭಿವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಕ್ಕಳನ್ನು ಉದ್ದೇಶಿಸಿ ಆದಿಯೋಗಿ ಎಜುಕೇಷನಲ್ ಟ್ರಸ್ಟ್ ನ ಅಧ್ಯಕ್ಷರಾದ ಎಸ್. ಜಿ. ಪಾಟೀಲ್ ರವರು ವಿಜೇತರಾದವರಿಗೆ ನಗದು ಬಹುಮಾನ ನೀಡಿ, ಮಕ್ಕಳಲ್ಲಿ ಪ್ರತಿಭೆ ಸುಪ್ತವಾಗಿರುತ್ತದೆ. ಅದನ್ನು ಹೊರತರುವ ಪ್ರಯತ್ನ ನಮ್ಮ ಸಂಸ್ಥೆಯು ಮಾಡುತ್ತದೆ. ಆದ್ದರಿಂದ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಸಲುವಾಗಿ ಈ ಪರೀಕ್ಷೆಯನ್ನು ನಡೆಸಲಾಯಿತು ಎಂದು ತಿಳಿಹೇಳಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿಗಳಾದ ಪವನಕುಮಾರ್ ಶೇಠ ಹಾಗೂ ಖಜಾಂಚಿಯಾದ ಕುಮಾರ್ ರಾಥೋಡ್ ರವರು ವಿಜೇತರಾದವರಿಗೆ ಅಭಿನಂದಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 