ಪ್ರತಿಭಾನ್ವಿತ ನಟ ಪುನೀತ್ ಅಕಾಲಿಕ ನಿಧನ ದುಃಖತಂದಿದೆ; ಅಮಿತ್ ಶಾ ಕಂಬನಿ
ನವದೆಹಲಿ, ಅ 30: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನದಿಂದ ತಮಗೆ ತೀವ್ರ ದುಃಖವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಂಬನಿ ಮಿಡಿದಿದ್ದಾರೆ.
ತಮ್ಮ ಬಹುಮುಖ ನಟನೆಯಿಂದ ಲಕ್ಷಾಂತರ ಹೃದಯಗಳನ್ನು ಗೆದ್ದ ಪುನೀತ್ ರಾಜ್‌ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ಹಲವು ಅಮೋಘ ನೆನಪುಗಳನ್ನು ನೀಡಿದ್ದಾರೆ ಎಂದು ಸ್ಮರಿಸಿದ್ದಾರೆ. ಅವರ ಕುಟುಂಬ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ನನ್ನ ಸಂತಾಪಗಳು ಎಂದು ಅಮಿತ್ ಶಾ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.