ಯಂಕಂಚಿ ಶ್ರೀಮಠದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
Talented students felicitated at Yankanchi Srimatthi
ಲೋಕದರ್ಶನ ವರದಿ
ಸಿಂದಗಿ 01: ಗುರುಗಳು ಕೇವಲ ಶಿಕ್ಷಣ ನೀಡುವವರಲ್ಲ, ಉತ್ತಮ ವ್ಯಕ್ತಿತ್ವ ರೂಪಿಸುವ ಶಿಲ್ಪಿಗಳಾಗಿದ್ದಾರೆ ಅಂತೆಯೇ ಗುರು-ಶಿಷ್ಯರ ಸಂಬಂಧವು ಭಾರತೀಯ ಸಂಸ್ಕೃತಿಯ ಜೀವಾಳವಾಗಿದೆ. ಎಂದು ಯಂಕಂಚಿ ಶ್ರೀಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.
ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಗುರು ಪೂರ್ಣಿಮೆಯ ಅಂಗವಾಗಿ ಹಮ್ಮಿಕೊಂಡಿದ್ದ ಗುರು ಪೂರ್ಣಿಮಾ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಆಶೀರ್ವಚನ ನೀಡಿ ಮಾತನಾಡಿದರು,
ವಿದ್ಯಾರ್ಥಿಗಳು ಶಿಕ್ಷಣ ಕಲಿತರೆ ಸಾಲದು ಸಂಸ್ಕಾರ ನೀಡುವ ತಮ್ಮ ಗುರುಗಳ ಮಾರ್ಗದರ್ಶನವನ್ನು ಗೌರವಿಸಿ ಶಿಸ್ತು, ಸಂಸ್ಕಾರ ಮತ್ತು ಪರಿಶ್ರಮದ ಮೂಲಕ ಉನ್ನತ ಸಾಧನೆ ಮಾಡಬೇಕು. ಇಂದಿನ ಸನ್ಮಾನವು ವಿದ್ಯಾರ್ಥಿಗಳಿಗೆ ಮತ್ತಷ್ಟು ಸಾಧನೆಗೆ ಪ್ರೇರಣೆಯಾಗಲಿ ಎಂದರು.
ಪ್ರಸಕ್ತ ಸಾಲಿನಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಮಾರಂಭದಲ್ಲಿ ಶ್ರೀಶೈಲ ಹದಗಲ, ಸಂಗು ಹದಗಲ, ನಾಗೇಶ ಮಜ್ಜಗಿ, ಸುರೇಶ ಕಂಬಾರ, ಶ್ರೀಶೈಲ ಜಾಲವಾದಿ ಸೇರಿದಂತೆ ಗ್ರಾಮಸ್ಥರು, ಪಾಲಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 