ತಾಳಿಕೋಟೆ: ಸರ್ವಜ್ಞ ವಿದ್ಯಾಪೀಠದಲ್ಲಿ ಹೆಚ್ಪಿವಿ ಲಸಿಕಾ ಕಾರ್ಯಕ್ರಮ
Talikote: HPV vaccination program at Sarvajna Vidyapeetha
ತಾಳಿಕೋಟೆ, ಜು.08: ಪಟ್ಟಣದ ಸರ್ವಜ್ಞ ವಿದ್ಯಾಪೀಠದಲ್ಲಿ 14 ರಿಂದ 15 ವರ್ಷದ ವಿದ್ಯಾರ್ಥಿನಿಯರಿಗೆ ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಪಿವಿ (ಹ್ಯೂಮನ್ ಪ್ಯಾಪಿಲೋಮಾ ವೈರಸ್) ಲಸಿಕಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಯಿತು.
ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಸುರಕ್ಷಿತ ಹಾಗೂ ಪರಿಣಾಮಕಾರಿ ಎಂದು ಪರಿಗಣಿಸಲ್ಪಡುವ ಈ ಲಸಿಕೆಯನ್ನು ಅರ್ಹ ವಿದ್ಯಾರ್ಥಿನಿಯರಿಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ ಭಾಗವಹಿಸಿ ಲಸಿಕೆಯ ಮಹತ್ವದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಧು ಟಕ್ಕಳಕಿ, ನೂರಜಾನ್ ಬೋರಗಿ, ವಿದ್ಯಾವತಿ ಬೂದಿಹಾಳ, ಆಶಾ ಕಾರ್ಯಕರ್ತೆಯರು, ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಬಿ. ಮಂಗಳೂರು, ಮುಖ್ಯಗುರುಗಳಾದ ಸಂತೋಷ ಪವಾರ್, ಶಾಂತಗೌಡ ಬಿರಾದಾರ, ಚೇತನ ನಾವದಗಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 