ಸಿರುಗುಪ್ಪ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಸಿರುಗುಪ್ಪ:  ಶಾಲಾ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊಮ್ಮುವ ಉದ್ಧೇಶದಿಂದ ಸರ್ಕಾರ  ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಪ್ರತಿಭಾ ಕಾರಂಜಿ  ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಹಶೀಲ್ದಾರ್ ಎನ್ ಆರ್ ಮಂಜುನಾಥ ಸ್ವಾಮಿ ಹೇಳಿದರು.

ಕರ್ನಾಟಕ ಸರ್ಕಾರ  ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ನಗರದ ವಿಶ್ವ ಜ್ಯೋತಿ ಶಾಲಾ ಸಭಾಂಗಣದಲ್ಲಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

 ಶಾಸಕ ಎಂ ಎಸ್ ಸೋಮಲಿಂಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು ತಾಲ್ಲೂಕು ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿ ಮಡಗಿನ ಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ ಡಿ ಭಜಂತ್ರಿ, ಸಂಪನ್ಮೂಲ ಕ್ಷೇತ್ರ ಸಮನ್ವಯಾಧಿಕಾರಿ ತಮ್ಮಣ್ಣಗೌಡ ಪಾಟೀಲ, ನಗರಸಭಾ ಅಧ್ಯಕ್ಷೆ ಸುಶೀಲಮ್ಮ ,ಕೆ ವೆಂಕಟರಾಮರೆಡ್ಡಿ, ಜಿಲ್ಲಾ ಸಾಕ್ಷರತಾ ಸದಸ್ಯ ಅಬ್ದುಲ್ ನಬಿ, ತಾಲ್ಲೂಕು ನೋಡೆಲ್ ಅಧಿಕಾರಿ ಚನ್ನಬಸವನಗೌಡ, ಶಿಕ್ಷಣ ಸಂಸ್ಥೆ ಅಧ್ಯಕ್ಷ ರು ಶಿಕ್ಷಕರು ವಿದ್ಯಾಥರ್ಿಗಳು ಇದ್ದರು ಮಕ್ಕಳು ವಿವಿಧ ವೇಷ ಧರಿಸುವುದರೊಂದಿಗೆ ಗಮನ ಸೆಳೆದರು 

ಸುದ್ದಿ ಓದಿ