ಕಾರವಾರ

ತಾಲೂಕ ಮಟ್ಟದ ಯುವ ಸಂಸತ್ತು ಸಭೆ

ತಾಲೂಕ ಮಟ್ಟದ ಯುವ ಸಂಸತ್ತು ಸಭೆ

ಲೋಕದರ್ಶನ ವರದಿ 


ಕಾರವಾರ 03 :- ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ತಾಲೂಕ ಆಡಳಿತ ತಾಲೂಕ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ, ಸಾಕ್ಷರತಾ ಇಲಾಖೆ  ಹಾಗೂ ಎಸ್‌.ಡಿ.ಎಂ ಪಿಯು ಕಾಲೇಜು ಹೊನ್ನಾವರ ಇವರ ಸಹಯೋಗದೊಂದಿಗೆ ತಾಲೂಕ ಮಟ್ಟದ ಯುವ ಸಂಸತ್ತು ಸಭೆಯನ್ನು ಎಸ್‌. ಡಿ.ಎಂ ಪಿಯು ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಲಾಯಿತು.  

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪ್ರವೀರ್ಣ ಕರಾಂಡೆ ಅವರು, ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಅಂಗವಾಗಿ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.  

ಸಹಾಯಕ ನಿರ್ದೇಶಕರು ಗ್ರೇಡ್‌-1 ಜಿ ಸತೀಶ್ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಸುಮಂಗಲಾ ಭಟ್ಟ ಸಂವಿಧಾನ ಪ್ರಸ್ತಾವನೆಯನ್ನು ಓದಿಸಿದರು. ಸುದೇಶ್ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು.  ಯುವ ಸಂಸತ್ತು ಕಾರ್ಯಕ್ರಮದಲ್ಲಿ ಎಸ್‌.ಡಿ.ಎಂ ಕಾಲೇಜಿನ ಪ್ರಾಂಶುಪಾಲರು, ಕಾರ್ಯದರ್ಶಿಗಳು ಎಲ್ಲ ಪ್ರಾಧ್ಯಾಪಕರು ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸರ್ಕಾರಿ ಪಿಯು ಕಾಲೇಜು ಹಾಗೂ ಎಲ್ಲಾ ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು. ನಿವೃತ್ತ ಪ್ರಾಚಾರ್ಯ ಪಾಠಣ್ಕರ್,  ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು, ವಿವಿಧ ಶಾಲಾ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು ಇದ್ದರು. 


ಸುದ್ದಿ ಓದಿ