ತಾಲೂಕು ಮಟ್ಟದ ಶಾಲಾ ಕ್ರೀಡಾಕೂಟಕ್ಕೆ ಚಾಲನೆ
ಕಾಗವಾಡ 01: ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಿಂದ ಸ್ಪರ್ಧಿಸಿ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಬೇಕು ಎಂದು ದೈಹಿಕ ಶಿಕ್ಷಣ ಪರೀವೀಕ್ಷಕ ಎಸ್.ಆರ್. ನೂರಾಜೆ ಹೇಳಿದರು. ಪಟ್ಟಣದ ಆಚಾರ್ಯ 108 ವಿದ್ಯಾಸಾಗರ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಗುರುವಾರ (ಅ.1) ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ವಿದ್ಯಾಸಾಗರ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ 14ರಿಂದ 17 ವರ್ಷ ವಯೋಮಿತಿಯ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಹಾಗೂ ತಂಡದ ಮನೋಭಾವ ಬೆಳೆಸುತ್ತವೆ. ಗೆಲುವು-ಸೋಲನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿಯಿಂದ ಸ್ಪರ್ಧಿಸಬೇಕು ಎಂದರು. ಕಾರ್ಯಕ್ರಮದಲ್ಲಿ ವಿದ್ಯಾಸಾಗರ ಸಂಸ್ಥೆಯ ಉಪಾಧ್ಯಕ್ಷ ಅಜೀತ ಮಗದುಮ್ಮ, ಸಿ.ಎಂ. ಸಂತೋಷ, ಎಲ್.ಕೆ. ಅರವಾಡೆ, ಎಸ್.ಎಸ್. ಭಾವಿ, ಕುಮಾರ ಗಾಣಿಗೇರ, ಎ.ಎಸ್. ಪಾಟೀಲ, ಕೆ.ವ್ಹಿ. ಕಾಂಬಳೆ, ಎ.ಎಚ್. ಮದಾಳೆ, ಎಸ್.ಬಿ. ಕುಪವಾಡೆ ಸೇರಿದಂತೆ ಸಿಆರ್ಸಿಗಳು, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಭರತ ಭಿಲವಡೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಭರತ ಟೊನಗೆ ವಂದಿಸಿದರು.