ಹುನಗುಂದ

ಪತ್ರಕರ್ತ ಬೇಪಾರಿಗೆ ತಾಲೂಕು ರಾಜ್ಯೋತ್ಸವ ಪ್ರಶಸ್ತಿ

ಪತ್ರಕರ್ತ ಬೇಪಾರಿಗೆ ತಾಲೂಕು ರಾಜ್ಯೋತ್ಸವ ಪ್ರಶಸ್ತಿ

ಹುನಗುಂದ ನವೆಂಬರ್ 05: ಸಮೀಪದ ಅಮೀನಗಡ ಪಟ್ಟಣದ ಕ್ರೀಯಾಶೀಲ ಪತ್ರಕರ್ತ ಎಚ್.ಎಚ್.ಬೇಪಾರಿ ಅವರ ಪತ್ರಿಕೋಧ್ಯಮ ಸೇವೆಯನ್ನು ಗುರುತಿಸಿ ತಾಲೂಕಾ ಆಡಳಿತ ತಾಲೂಕಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ನಗರದ ತಾಲೂಕ ಆಡಳಿತ ಭವನದಲ್ಲಿ ತಾಲೂಕಾ ಆಡಳಿತದ ವತಿಯಿಂದ ಹಮ್ಮಿಕೊಂಡ 65ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಹಾಗೂ ಸಾಧಕರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ಕಳೆದ ಹಲವಾರು ವರ್ಷಗಳಿಂದ ಪತ್ರಿಕೋಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಪತ್ರಕರ್ತ ಎಚ್.ಎಚ್.ಬೇಪಾರಿ ಅವರ ಅಪ್ರತಿಮ ಸಾಧನೆ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು.

ಮತಕ್ಷೇತ್ರದ ಶಾಸಕ ದೊಡ್ಡನಗೌಡ ಪಾಟೀಲ, ತಹಶೀಲ್ದಾರ ಬಸವರಾಜ ನಾಗರಾಳ, ಕನ್ನಡ ಸಾಹಿತ್ಯ ಪರಿಷತ್ ತಾಲೂಕ ಅಧ್ಯಕ್ಷ ಮಹಾಂತೇಶ ಖ್ಯಾತ ಡಾ.ಮಹಾಂತೇಶ ಕಡಪಟ್ಟಿ ಸೇರಿದಂತೆ ಇತರರು ಇದ್ದರು.

ಸುದ್ದಿ ಓದಿ