ಮನರಂಜನೆ

ಕೋವಿಡ್ 19 : ಮಿಲ್ಕ್ ಬ್ಯೂಟಿ ತಮನ್ನಾ ಭಾಟಿಯಾ ಆಸ್ಪತ್ರೆಗೆ ದಾಖಲು

ಕೋವಿಡ್ 19 : ಮಿಲ್ಕ್ ಬ್ಯೂಟಿ ತಮನ್ನಾ ಭಾಟಿಯಾ ಆಸ್ಪತ್ರೆಗೆ ದಾಖಲು

ಹೈದರಾಬಾದ್‍, ಅಕ್ಟೋಬರ್ 05: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಭಾಟಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಿಲ್ಕಿ ಬ್ಯೂಟಿ  ಹೈದರಾಬಾದ್ ನಲ್ಲಿ ನಡೆಯುತ್ತಿದ್ದ ವೆಬ್ ಸೀರಿಸ್ ಚಿತ್ರೀಕರಣವೊಂದರಲ್ಲಿ ಬ್ಯುಸಿಯಾಗಿದ್ದರು. ಈ ವೇಳೆ ಕೊರೊನಾ ರೋಗ ಲಕ್ಷಣಗಳು ಕಾಣಿಸಿಕೊಂಡಿದೆ. ಬಳಿಕ ಪರೀಕ್ಷೆ ಮಾಡಿಸಿಕೊಂಡ ತಮನ್ನಾಗೆ ಕೊರೊನಾ ಸೋಂಕು ಇರುವುದು ದೃಢಪಟ್ಟ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. 

ನೆಚ್ಚಿನ ನಟಿ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಕಳೆದ ತಿಂಗಳು ನಟಿ ತಮನ್ನಾ ಪೋಷಕರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ತಂದೆ ಸಂತೋಷ್ ಭಾಟಿಯಾ ಹಾಗೂ ತಾಯಿ ರಜನಿ ಭಾಟಿಯಾಗೆ ಕೊರೊನಾ ಪಾಸಿಟಿವ್ ಬಂದ ಬಗ್ಗೆ ಸ್ವತಹ ನಟಿ ತಮನ್ನಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

'ಅಪ್ಪ-ಅಮ್ಮನಿಗೆ ಕೊರೊನಾ ವರದಿ ಪಾಸಿಟಿವ್ ಬಂದಿದೆ. ನನ್ನ ವರದಿ ನೆಗೆಟಿವ್ ಬಂದಿದೆ. ಪೋಷಕರು ಶೀಘ್ರ ಗುಣಮುಖರಾಗಲಿದ್ದಾರೆ. ನೀವು ದೇವರಲ್ಲಿ ಪ್ರಾರ್ಥಿಸಿ' ಎಂದು ಹೇಳಿದ್ದರು. ಇದೀಗ ತಿಂಗಳ ಬಳಿಕ ಈಗ ತಮನ್ನಾಗೆ ಕೊರೊನಾ ಸೋಂಕು ದೃಢಪಟ್ಟಿದೆ. 

ಸುದ್ದಿ ಓದಿ