ಮನರಂಜನೆ

ನಟ ರಜನಿಕಾಂತ್ ಆರೋಗ್ಯ ವಿಚಾರಿಸಿದ ತಮಿಳುನಾಡು ಸಿಎಂ ಸ್ಟಾಲಿನ್​​​​

ನಟ ರಜನಿಕಾಂತ್ ಆರೋಗ್ಯ ವಿಚಾರಿಸಿದ ತಮಿಳುನಾಡು ಸಿಎಂ ಸ್ಟಾಲಿನ್​​​​

ಚೆನ್ನೈ : ಅ. 31: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಇಂದು ಚೆನ್ನೈನ ಕಾವೇರಿ ಆಸ್ಪತ್ರೆಗೆ ಭೇಟಿ ನೀಡಿ, ಸೂಪರ್​ ಸ್ಟಾರ್​ ರಜನಿಕಾಂತ್​​ ಆರೋಗ್ಯವನ್ನು ವಿಚಾರಿಸಿದರು.

ನಟ ರಜನಿಕಾಂತ್ ಅವರು ಒಂದೆರಡು ದಿನಗಳ ಹಿಂದೆ ಮಿದುಳಿನ ರಕ್ತ ಸಂಚಾರ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ನಡೆಸಲಾಗುವ ಶಸ್ತ್ರಚಿಕಿತ್ಸೆಗೆ ( carotid artery revascularisation surgery)ಒಳಗಾಗಿದ್ದು, ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೇನ್ನು ಕೆಲವೇ ದಿನಗಳಲ್ಲಿ ರಜನಿಕಾಂತ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ನಟ ರಜನಿಕಾಂತ್ ಅವರ ಆರೋಗ್ಯ ವಿಚಾರಿಸಿದ ಬಳಿಕ, ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. 

ರಜನಿಕಾಂತ್​​ ಪತ್ನಿ ಲತಾ ಅವರು ಏನೂ ತೊಂದರೆ ಇಲ್ಲ ಎಂದಿದ್ದಾರೆ. ಆದ್ರೆ ರಜನಿಕಾಂತ್ ಅವರ ನಿಕಟ ಮೂಲಗಳು ಅವರಿಗೆ ಇನ್ನೂ ಎದೆ ನೋವು ಮತ್ತು ಅಸ್ವಸ್ಥತೆ ಇದೆ ಎಂದು ಹೇಳುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ. 

ರಜನಿಕಾಂತ್ ಆಸ್ಪತ್ರೆಗೆ ದಾಖಲಾದ ಒಂದು ದಿನದ ನಂತರ, ಕಾವೇರಿ ಆಸ್ಪತ್ರೆ ವೈದ್ಯರು ಹೆಲ್ತ್​​ ಬುಲೆಟಿನ್​​ನನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಅವರು ಮಿದುಳಿನ ರಕ್ತ ಸಂಚಾರ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ನಡೆಸಲಾಗುವ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಬಗ್ಗೆ ಮಾಹಿತಿ ನೀಡಿದ್ಧಾರೆ.

ನಟ ರಜನಿಕಾಂತ್​ ಅವರು ಅ.28ರಂದು ತಲೆತಿರುಗುತ್ತಿದೆ ಎಂದು ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಜ್ಞರು ಅವರನ್ನು ಕೂಲಂಕುಷವಾಗಿ ಪರೀಕ್ಷಿಸಿ, ಶಸ್ತ್ರಚಿಕಿತ್ಸೆ ಮಾಡುವಂತೆ ಸೂಚಿಸಿದರು. ಬಳಿಕ ಅ.29ರಂದು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೆಲ್ತ್​​ಬುಲೆಟಿನ್​ನಲ್ಲಿದೆ.

ರಜನಿಕಾಂತ್ ತಮ್ಮ ಮುಂಬರುವ ಚಿತ್ರ ಅಣ್ಣಾತ್ತೆ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಚಿತ್ರವು ದೀಪಾವಳಿ ಸಂದರ್ಭದಲ್ಲಿ ಅಂದರೆ ನವೆಂಬರ್ 4 ರಂದು ಬಿಡುಗಡೆಯಾಗಲಿದೆ.


ಸುದ್ದಿ ಓದಿ