ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
Teacher's Day Celebration, Best Teacher Award
ಕೊಪ್ಪಳ 10: ಕರ್ನಾಟಕ ಪಬ್ಲಿಕ್ ಸ್ಕೂಲ್ಸ್ ಅಸೋಸಿಯೇಷನ್ (ಕೆಪಿಎಸ್‌ಎ) ಕೊಪ್ಪಳ ತಾಲೂಕು ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ಶಿಕ್ಷಕರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸೆ. 12ರಂದು ಬೆಳಗ್ಗೆ 10 ಗಂಟೆಗೆ ನಗರದ ಹೊಸಪೇಟೆ ರಸ್ತೆಯ ಮಧುಶ್ರೀ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಕುರಿತು ಕೆಪಿಎಸ್‌ಎ ಕೊಪ್ಪಳ ತಾಲೂಕು ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಗೀರೀಶ್ ಕಣವಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಸಂಸ್ಥಾನ ಶ್ರೀ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹಾಗೂ ಭಾಗ್ಯನಗರದ ಶ್ರೀ ಶಾರದಾಂಬ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಶ್ರೀ ಶಿವರಾಮಕೃಷ್ಣಾನಂದ ಭಾರತೀ ಸ್ವಾಮೀಜಿಗಳು ವಹಿಸಲಿದ್ದಾರೆ.
ಕೊಪ್ಪಳ ಸಂಸದ ಕೆ. ರಾಜಶೇಖರ ಹಿಟ್ನಾಳ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಅವರು ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಮಾಜಿ ಸಂಸದ ಸಂಗಣ್ಣ ಕರಡಿ ಅವರು ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಖಾಸಗಿ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಭಾಗವಹಿಸಲಿದ್ದಾರೆ. ಶಿಕ್ಷಕರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಗೀರೀಶ್ ಕಣವಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾ ಮುಖಂಡರಾದ ಪ್ರಹ್ಲಾದ ಅಗಡಿ, ಶಿವಕುಮಾರ್ ಕುಕನೂರು, ನೀತೀಶ್ ಕುಮಾರ್ ಪುಲಸ್ಕರ್ ಸೇರಿದಂತೆ ಜಿಲ್ಲಾ ಮಂಡಳಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 