ಶಿಕ್ಷಕಿ ಎಎಂಪಿ ದ್ರಾಕ್ಷಿಯಣಿ ಸೇವಾ ನಿವೃತ್ತಿ : ಹೃದಯಸ್ಪರ್ಶಿ ಬೀಳ್ಕೊಡುಗೆ
ಲೋಕದರ್ಶನ ವರದಿ
ಹೂವಿನಹಡಗಲಿ 18: ತಾಲ್ಲೂಕಿನ ಹೊಳಗುಂದಿ ಗ್ರಾಮದ ಸಿದ್ದೇಶ್ವರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ, ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿ ದ್ರಾಕ್ಷಿಯಣಿ ಅವರನ್ನು ಶಾಲೆಯ ಶಿಕ್ಷಕ ಬಳಗ ಹಾಗೂ ವಿದ್ಯಾರ್ಥಿಗಳು ಬುಧವಾರ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಬೀಳ್ಕೊಟ್ಟರು.ಗ್ರಾ.ಪಂ.ಮಾಜಿ ಸದಸ್ಯರಾದ ರುದ್ರಗೌಡ, ಭಾಷಾ ಎಂ. ಮಾತನಾಡಿ‘ಶಿಸ್ತು, ಕರ್ತವ್ಯ ನಿಷ್ಠೆ ಮೈಗೂಡಿಸಿಕೊಂಡಿದ್ದ ಶಿಕ್ಷಕಿ ಅವರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದ್ದಾರೆ. ಅವರ ನಿವೃತ್ತಿಯ ಬದುಕು ಸಂತೋಷದಿಂದ ಕೂಡಿರಲಿ ಎಂದು ಆಶಿಸಿದರು. ಇದೇ ವೇಳೆ ಶಿಕ್ಷಕ ಸಿಬ್ಬಂದಿ, ಅಂಗನವಾಡಿ ಮತ್ತು ,ಶಾಲಾ ಅಭಿವೃದ್ಧಿ ಸಮಿತಿಯವರು ಇದ್ದರು.