50 ವರ್ಷಗಳ ಬಳಿಕ ಗುರುಗಳಿಗೆ ಸನ್ಮಾನ: ಶಿಷ್ಯರ ಕೃತಜ್ಞತೆಗೆ ಸಾಕ್ಷಿಯಾದ ಗುರುವಂದನಾ ಕಾರ್ಯಕ್ರಮ
Teacher Honored After 50 Years: 'Guruvandana' Event Witnesses Students' Gratitude
ಲೋಕದರ್ಶನ ವರದಿ
ಕಾಗವಾಡ 26 : ಕ್ಷಮೆ ಮತ್ತು ಕ್ಷೇಮೆಯ ಗುಣಗಳು ಕೇವಲ ಗುರುಗಳಲ್ಲಿ ಮಾತ್ರ ಕಾಣಲು ಸಾಧ್ಯ. ವಿದ್ಯಾರ್ಥಿಗಳು ತಪ್ಪು ಮಾಡಿದಾಗ ಕ್ಷಮಿಸಿ, ಅವರಿಂದ ತಪ್ಪಾಗಿದೆ ಎಂದು ಅರಿವಾದಾಗ ಮುಲಾಜಿಲ್ಲದೆ ಕ್ಷೇಮೆ ಕೇಳಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಗುರುಗಳನ್ನು 50 ವರ್ಷಗಳ ಬಳಿಕ ಸನ್ಮಾನಿಸುವುದು ನಿಜಕ್ಕೂ ಗೌರವದ ವಿಷಯವಾಗಿದೆ ಎಂದು ಬೆಳಗಾವಿ ಸನ್ಮತಿ ಶಿಕ್ಷಣ ಸಹಕಾರಿ ಸಮಿತಿಯ ಶಾಲೆ ಮತ್ತು ಕಾಲೇಜು ಆಡಳಿತ ಮಂಡಳಿ ಸದಸ್ಯ ಎ.ಬಿ. ಪಾಟೀಲ ಹೇಳಿದರು.
ಅವರು ಭಾನುವಾರ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಸನ್ಮತಿ ವಿದ್ಯಾಲಯದಲ್ಲಿ 1975-76ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
50 ವರ್ಷಗಳ ಹಿಂದೆ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಎ.ಬಿ. ಪಾಟೀಲರು ಇದೇ ಸಂಸ್ಥೆಯಲ್ಲಿ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿದ್ದು, ಇದೀಗ ಶಾಲಾ-ಕಾಲೇಜು ಆಡಳಿತ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಹಳೆಯ ವಿದ್ಯಾರ್ಥಿಗಳೆಲ್ಲರೂ ಒಟ್ಟಾಗಿ ತಾವು ಕಲಿತ ಶಾಲೆಗೆ ಸಾಧ್ಯವಾದಷ್ಟು ಸೇವೆ ಸಲ್ಲಿಸುವ ಉದ್ದೇಶ ಹೊಂದಿದ್ದೇವೆ ಎಂದು ಅವರು ಹೇಳಿದರು.
ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಅಗಲಿದ ಗುರುಗಳ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಅಗಲಿದ ಸಹಪಾಠಿಗಳಿಗೆ ಶ್ರದ್ಧಾಂಜಲಿ ಅರ್ಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಗೆ ಪಾಠ ಕಲಿಸಿದ ಗುರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ರ್ಯಾಂಕ್ ಪಡೆದಿದ್ದ ಸಂತೋಷ ರತ್ನಪ್ಪಗೋಳ ಅವರ ತಂದೆಯನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
50 ವರ್ಷಗಳ ಹಿಂದಿನ ಶಾಲಾ ದಿನಗಳನ್ನು ನೆನಪಿಸಿಕೊಂಡ ಹಳೆಯ ವಿದ್ಯಾರ್ಥಿಗಳು ಭಾವುಕರಾದರು. ತಮ್ಮ ಜೀವನ ರೂಪಿಸಿದ ಗುರುಗಳ ಸೇವೆಯನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಬಿ.ಬಿ. ಪಾಟೀಲ, ಬಿ.ಜೆ. ಕುರುಂದವಾಡೆ, ಬಿ.ಆರ್. ಜೋಶಿ, ಎಂ.ಡಿ. ಅಲಾಸೆ, ಸನ್ಮತಿ ಶಿಕ್ಷಣ ಸಹಕಾರಿ ಸಮಿತಿಯ ಅಧ್ಯಕ್ಷ ವಿನೋದ ಬರಗಾಲೆ ಸೇರಿದಂತೆ 1975-76ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಸ್.ಎಸ್. ಹಿರೇಮಠ ಸ್ವಾಗತಿಸಿದರು. ನಿರೂಪಣೆಯನ್ನು ನೆರವೇರಿಸಿದರು. ರವೀಂದ್ರ ಕೋರೆ ವಂದಿಸಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 