ಶಿಕ್ಷಕ ನಾಗಪ್ಪ ಸಂಗಮ ನಿಧನ
ಗುಳೇದಗುಡ್ಡ, 2: ಗುಳೇದಗುಡ್ಡದ ನಿವಾಸಿ ನಾಗಪ್ಪ ಯಲ್ಲಪ್ಪ ಸಂಗಮ (42) ಮಂಗಳವಾರ ಬೆಳಗಿನ ಜಾವ ನಿಧನರಾದರು. ಅವರು ತಂದೆ, ತಾಯಿ, ಪತ್ನಿ, ಒಬ್ಬ ಮಗ, ಒಬ್ಬಳು ಮಗಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಜಂಬಗಿ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ಅಂತ್ಯಕ್ರಿಯೆ ಗುಳೇದಗುಡ್ಡದಲ್ಲಿ ಮಂಗಳವಾರ ಜರುಗಿತು.