ರಾಜ್ಯ ಪ್ರಶಸ್ತಿಗೆ ಶಿಕ್ಷಕ ಸಂತೋಷ ಬಂಡೆ ಆಯ್ಕೆ
Teacher Santhosh Bande selected for state award
ಇಂಡಿ 09: ಬೆಂಗಳೂರಿನ ಶಿಕ್ಷಣ ಜ್ಞಾನ ಮಾಸಪತ್ರಿಕೆಯ 22ನೇ ವಾರ್ಷಿಕೋತ್ಸವದ ನಿಮಿತ್ತ 2024-25 ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದ ಸಾಧಕರಿಗೆ ಕೊಡಮಾಡುವ ’ರಾಜ್ಯ ಮಟ್ಟದ ಬಹುಮುಖ ಶಿಕ್ಷಕ ಪ್ರತಿಭೆ ರತ್ನ’ ಪ್ರಶಸ್ತಿಗೆ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಬಂಡೆ ಅವರು ಆಯ್ಕೆಯಾಗಿದ್ದಾರೆ.
ಶಿಕ್ಷಕ ಸಂತೋಷ ಬಂಡೆ ಅವರ ಶೈಕ್ಷಣಿಕ, ಸಾಹಿತ್ಯಿಕ,ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಅನೇಕ ವಿಭಾಗಗಳಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಸೇರಿದಂತೆ ಅನೇಕ ಗಣ್ಯರು ಬೀಳಗಿಯಲ್ಲಿ ಜರುಗುವ ’ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶ’ದಲ್ಲಿ ಪ್ರಶಸ್ತಿ ಪ್ರದಾನ ಮಾಡುವರು ಎಂದು ಡಾ. ಎಚ್ ರಾಮಚಂದ್ರ್ಪ ತಿಳಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 