8 ದಿನಗಳಲ್ಲಿ ಜಾತಿ ಗಣತಿ ಮುಗಿಸಿದ ಶಿಕ್ಷಕನಿಗೆ ಸನ್ಮಾನ
Teacher honored for completing caste census in 8 days
ದೇವರಹಿಪ್ಪರಗಿ 30: ಕರ್ನಾಟಕ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಗಣತಿದಾರರಿಗೆ ದೊಡ್ಡ ತಲೆನೋವಾಗಿ ಮಾರ್ಪಟಟಿರುವ ಬಗ್ಗೆ ಸಾಕಷ್ಟು ಮಾತುಗಳು ಕೇಳಿ ಬಂದಿದ್ದವು. ಆದ್ರೆ ತಾಲೂಕಿನ ಯಾಳವಾರ ಹೊಸನಗರ ಗ್ರಾಮದ ಸಹ ಶಿಕ್ಷಕಯೋರ್ವರು ಕಡಕೋಳ ಗ್ರಾಮ ವ್ಯಾಪ್ತಿಯಲ್ಲಿ ಕೇವಲ 8ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಗ್ರಾಮದ ಜನರು ಕೆಲಸಕ್ಕೆ ಹೋಗುವ ಮುನ್ನ ಮನೆಗೆ ಭೇಟಿ ನೀಡುತ್ತಿದ್ದ ಶಿಕ್ಷಕ ನಿಂಗರಾಜ ಜಾಲವಾದ ಗ್ರಾಮದಲ್ಲೇ ಉಳಿದುಕೊಂಡು ಸಮೀಕ್ಷೆ ಕಾರ್ಯ ಮುಗಿಸಿದ್ದಾರೆ. ನಿಂಗರಾಜ ಅವರ ಕಾರ್ಯಕ್ಕೆ ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರು ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನಿಸಿ, ಗೌರವಿಸಿದ್ದಾರೆ. ಶಿಕ್ಷಕನ ಈ ಕಾರ್ಯಕ್ಕೆ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್.ವಾಲೀಕಾರ, ಕಸಾಪ ತಾಲೂಕು ಮಾಜಿ ಅಧ್ಯಕ್ಷ ಜಿ.ಪಿ.ಬಿರಾದಾರ ಸೇರಿದಂತೆ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕಂದಾಯ ಶಿರಸ್ತೇದಾರರಾದ ಡಿ.ಬಿ.ಬೋವಿ, ಸುರೇಶ ಮ್ಯಾಗೇರಿ ಸೇರಿದಂತೆ ಕಂದಾಯ, ಶಿಕ್ಷಣ, ಒಬಿಸಿ ಇಲಾಖೆ ಸಿಬ್ಬಂದಿ ವರ್ಗ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 