ಸರ್ವಜ್ಞ ವಿದ್ಯಾಪೀಠದಲ್ಲಿ ಶಿಕ್ಷಕರ ದಿನಾಚರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ಶಿಕ್ಷಕರ ದಿನಾಚರಣೆ  Teachers' Day Celebration at Sarvajna Vidyapeetha


ತಾಳಿಕೋಟೆ 06 : ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪೌಢಶಾಲೆಯಲ್ಲಿ ಭಾರತದ ರಾಷ್ಟ್ರಪತಿ ಹಾಗೂ ಶಿಕ್ಷಣ ತಜ್ಞರಾದ ಡಾಽಽ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತೋತ್ಸವದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಬ ಮಂಗಳೂರ,ಮುಖ್ಯಗುರುಗಳಾದ ಸಂತೋಷ ಪವಾರ, ಶಿಕ್ಷಕ ವೃಂದ, ಸರ್ವ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.