ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
Teachers' Day Celebration at the Government Model Kannada Girls' Primary School
ಲಕ್ಷ್ಮೇಶ್ವರ, ಸೆ. 6: ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸಲಾಯಿತು. ಬಳಿಕ ಶಿಕ್ಷಕರ ದಿನಾಚರಣೆಯ ಮಹತ್ವ ಕುರಿತು ಮಾತನಾಡಿದ ಶಾಲೆಯ ಪ್ರಧಾನ ಗುರುಗಳಾದ ಬಸವರಾಜ ಕುಂಬಾರ, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಿ ಸೇವೆ ಸಲ್ಲಿಸುವುದರ ಜೊತೆಗೆ ದೇಶದ ಉಪರಾಷ್ಟ್ರಪತಿಯಾಗಿ ಅಪಾರ ಕೊಡುಗೆ ನೀಡಿದ್ದಾರೆ. ಅವರ ಜನ್ಮದಿನವಾದ ಸೆ. 5ರಂದು ದೇಶಾದ್ಯಂತ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ನಂತರ ಎಸ್ಟಿಪಿಎಂ ಪ್ರಾಥಮಿಕ ಶಾಲೆಯಲ್ಲಿ ನಡೆದ ಗುಂಪು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. 100 ಮೀಟರ್ ಓಟದಲ್ಲಿ ಸಂಜನಾ ಸುಣಗಾರ ಪ್ರಥಮ ಸ್ಥಾನ, 100 ಮೀಟರ್ ಓಟದಲ್ಲಿ ಲಕ್ಷ್ಮೀ ಹೆಗ್ಗಣ್ಣವರ ಪ್ರಥಮ ಸ್ಥಾನ, 80 ಮೀಟರ್ ಹರ್ಡಲ್ಸ್ನಲ್ಲಿ ಮಧು ಟೊಕಾಳಿ ಪ್ರಥಮ ಸ್ಥಾನ ಪಡೆದರು. 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ 4ಸ100 ಮೀಟರ್ ಓಟದಲ್ಲಿ ದ್ವಿತೀಯ, 07ನೇ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಪ್ರಧಾನ ಗುರುಗಳು ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 