ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ
Teachers' Day celebration at Maharana Pratap Simha Educational Institute
ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ
ಬೆಟಗೇರಿ 05: ಇಂದು ನಗರದ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮಾಜಿ ಉಪರಾಷ್ಟ್ರಪತಿಗಳಾಗಿದ್ದ ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜಯಂತಿಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಏರಿ್ಡಸಲಾಗಿತ್ತು, ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಗಣೇಶಸಿಂಗ ಬ್ಯಾಳಿಯವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಧಾಕೃಷ್ಣನ್‌ರವರ ಕುರಿತು ಮಾತನಾಡಿದರು.
ಇತ್ತೀಚೇಗಷ್ಟೇ ಬೆಟಗೇರಿಯ ಕನ್ನಡ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ನಂ.:3 ಶಾಲೆಯಲ್ಲಿ ಮುಖ್ಯಾಧ್ಯಾಪಕಿಯಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಪಿ.ಆರ್.ನಿಡಗುಂದಿ ಇವರು ಸಂಸ್ಥೆಯ ಪರವಾಗಿ ಶಾಲು ಹೊದಿಸಿ ಪುಷ್ಪ ಮಾಲೆ ಹಾಕಿ ಸಲ್ಲಿಸಿದ ಗೌರವ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ ನಮ್ಮ ಶಾಲೆಗೂ ಈ ಸಂಸ್ಥೆಗೆ ನಿಕಟವಾದ ಸಂಬಂಧವಿದ್ದು ಸಂಸ್ಥಾಪಕರಾದ ಗಣೇಶಸಿಂಗ ಬ್ಯಾಳಿಯವರು ನಮ್ಮ ಶಾಲೆಗೆ ಸಹಾಯ ಸಹಕಾರ ನೀಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿ ಧನ್ಯವಾದಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರೌಢ ಶಾಲಾ ಮುಖ್ಯಾಧ್ಯಾಪಕರಾದ ಎಸ್.ಎಸ್.ಬಡಿಗೇರ, ಪ್ರಾಚಾರ್ಯರಾದ ಎಸ್.ಎಂ.ಉಳ್ಳಾಗಡ್ಡಿ, ಸಮಸ್ತ ಸಿಬ್ಬಂದಿ ಹಾಗೂ ವಿದ್ಯಾರ್ಥಿವೃಂದ ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 