ಆರೋಗ್ಯ ಪೂರ್ಣ ಪ್ರಜೆಯನ್ನು ರೂಪಿಸುವ ಜವಾದ್ದಾರಿ ಶಿಕ್ಷಕರದ್ದು: ಕರಜಗಿ
ಇಂಡಿ: ಎಲ್ಲ ವಿಷಯಗಳಲ್ಲೂ ಸಮಾನತೆ ಕಾಯ್ದುಕೊಂಡು ಆರೋಗ್ಯಪೂರ್ಣ ಸಮಾಜಕ್ಕಾಗಿ ಆರೋಗ್ಯ ಪೂರ್ಣ ಪ್ರಜೆಯನ್ನು ರೂಪಿಸುವ ಜವಾದ್ದಾರಿ ಶಿಕ್ಷಕರದ್ದು ಎಂದು ಶಿಕ್ಷಕ ಬಸವರಾಜ ಕರಜಗಿ ಹೇಳಿದರು.
ಅವರು ಬುಧವಾರ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ಯುಬಿಎಸ್, ಶಾಲೆಯಲ್ಲಿ ಶಿಕ್ಷಕರ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನಿಸಿ ಮಾತನಾಡಿದರು.
ನೈತಿಕ ಮೌಲ್ಯವು ವಿದ್ಯಾರ್ಥಿಗಳ ಜೀವನದ ರೂಪುರೇಷೆಯನ್ನೇ ಬದಲಿಸುತ್ತದೆ. ಮಕ್ಕಳಲ್ಲಿ ನೈತಿಕ ಸದ್ಗುಣಗಳಾದ ಶ್ರದ್ಧೆ, ನಿಷ್ಟೆ, ಪ್ರಾಮಾಣಿಕತೆ, ಸಹನೆ, ಅನುಕಂಪ, ನ್ಯಾಯ, ಸಚ್ಚಾರಿತ್ರ್ಯ, ಅಹಿಂಸೆ, ಸಹೋದರತ್ವ ಇವೇ ಮೊದಲಾದ ಗುಣಗಳನ್ನು ಬೆಳೆಸುವುದಾಗಿದೆ ಎಂದರು.
ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ವ್ಯಕ್ತಿತ್ವ ವಿಕಾಸನಕ್ಕೆ ಶಿಕ್ಷಣ ಅವಶ್ಯವಾಗಿದ್ದು. ಈ ನಿಟ್ಟಿನಲ್ಲಿ ನಾವು ನೈತಿಕ ಹಾಗೂ ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡಬೇಕಾಗಿದೆ. ಪಾಲಕರು ಹಾಗೂ ಶಿಕ್ಷಕರು ಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಅಧ್ಯಕ್ಷತೆ ವಹಿಸಿದರು. ಕೆ.ಬಿ.ಎಸ್ ಶಾಲಾ ಮುಖ್ಯ ಶಿಕ್ಷಕಿ ಎಂ.ಎಸ್. ಸಾಲೋಟಗಿ, ಸುರೇಶ ಅಂಕಲಗಿ, ಟಿ.ಜಿ.ಟಿ. ಶಿಕ್ಷಕ ಎಸ್.ಎಸ್. ಅರಬ ಮಾತನಾಡಿದರು.
ಶಿಕ್ಷಕರಾದ ಎಸ್.ಎಚ್. ಮೈದರಗಿ, ಎನ್. ಬಿ. ಚೌಧರಿ, ಎಸ್.ಬಿ. ಹೆಬ್ಬಾಳ, ಅಬ್ದುಲ್ ಗಪೂರ ಮುಜಾವರ, ಗ್ರಾ.ಪಂ. ಸದಸ್ಯ ನಿಸಾರ್ ಅಹಮದ್ ಬಾಗವಾನ, ಸಲೀಮ್ ಅಂಗಡಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಸುಭಾನುಲ್ಲಾ ಅಂಗಡಿ, ಅಬ್ದುಲ್ ರೆಹಮಾನ್ ಬಾಗವಾನ, ಜಾವೀದ ಬಾಗವಾನ ಸೇರಿದಂತೆ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವರ್ಗಾವಣೆಗೊಂಡ ಬವರಾಜ ಕರಜಗಿ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಶಿಕ್ಷಕಿ ಎಸ್.ಪಿ. ಪೂಜಾರಿ ಅವರನ್ನು ಬರಮಾಡಿಕೊಳ್ಳಲಾಯಿತ್ತು.