ಶಿಕ್ಷಕ ಸಮುದಾಯಕ್ಕೆ ರಾಷ್ಟ್ರಪತಿ, ಪ್ರಧಾನಮಂತ್ರಿ, ಗೃಹ ಸಚಿವರಿಂದ ಶುಭಾಶಯ
ನವದೆಹಲಿ, ಸೆಪ್ಟೆಂಬರ್ 5: ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯ ಮತ್ತು ಗೃಹ ಸಚಿವ ಅಮಿತ್ ಶಾ ಶಿಕ್ಷಕ ಸಮುದಾಯಕ್ಕೆ ಶುಭಾಶಯ ಕೋರಿದ್ದಾರೆ.
ಶಿಕ್ಷಕರ ದಿನಾಚರಣೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಡಾ.ಎಸ್.ರಾಧಾಕೃಷ್ಣನ್ ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಹಾಗೂ ದೇಶದ ಶಿಕ್ಷಕರಿಗೂ ಹೃದಯಪೂರ್ವಕ ಶುಭಾಶಯ ಹೇಳುವುದಾಗಿ ತಿಳಿಸಿದ್ದಾರೆ.
ದೇಶವನ್ನು ಕಟ್ಟುವಲ್ಲಿ ಶಿಕ್ಷಕರ ಪರಿಶ್ರಮಕ್ಕೆ ನಾವು ಕೃತಜ್ಞರಾಗಿರುತ್ತೇವೆ. ಶಿಕ್ಷಕರ ದಿನದಂದು, ಶಿಕ್ಷಕರ ಪರಿಶ್ರಮಕ್ಕೆ ಕೃತಜ್ಞತೆ ಅರ್ಪಿಸುತ್ತೇನೆ. ಡಾ.ಎಸ್.ರಾಧಾಕೃಷ್ಣನ್ ಅವರ ಜನ್ಮನದಿಂದು ಅವರಿಗೆ ನಾವು ಗೌರವ ಸಲ್ಲಿಸುತ್ತೇನೆ. ಶಿಕ್ಷಕರು ನಮ್ಮ ಸಮಾಜದ ನಿಜವಾದ ಹೀರೋಗಳು ಎಂದು ತಿಳಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ "ಅಪ್ರತಿಮ ಚಿಂತಕ ಮತ್ತು ವಿದ್ವಾಂಸ, ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ಸಲ್ಲಿಸುತ್ತೇನೆ. ನಿಸ್ವಾರ್ಥವಾಗಿ ಮಾರ್ಗದರ್ಶನ ಮಾಡುವ ಮೂಲಕ ರಾಷ್ಟ್ದ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಶಿಕ್ಷಕ ವರ್ಗಕ್ಕೆ ಶುಭಾಶಯಗಳು ಎಂದೂ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.