ಶಿಕ್ಷಕರ ದಿನಾಚರಣೆ ಪ್ರಯುಕ್ತ ಇನ್ನರ್ ವೀಲ್ ಕ್ಲಬ್ ದಿಂದ ಶಿಕ್ಷಕರಿಗೆ ಸನ್ಮಾನ
Teachers felicitated by the Inner Wheel Club on the occasion of Teachers' Day.
ಶಿಕ್ಷಕರ ದಿನಾಚರಣೆ ಪ್ರಯುಕ್ತ ಇನ್ನರ್ ವೀಲ್ ಕ್ಲಬ್ ದಿಂದ ಶಿಕ್ಷಕರಿಗೆ ಸನ್ಮಾನ
ಕೊಪ್ಪಳ 11: ತಾಲೂಕಿನ ದದೆಗಲ್ ಮತ್ತು ಕಾಟರಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಕೊಪ್ಪಳ ಇನ್ನರ್ ವೀಲ್ ಕ್ಲಬ್ ದತ್ತಕ ಶಾಲೆಗಳಾಗಿದ್ದು ಈ ಎರಡು ಶಾಲೆಗಳಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಕ್ಲಬ್ ಪರವಾಗಿ ಶಿಕ್ಷಕರಿಗೆ ಸನ್ಮಾನಿಸಲಾಯಿತು, ಶಿಕ್ಷಕರ ದಿನಾಚರಣೆ ಯ ಕಾರ್ಯಕ್ರಮದ ಅಂಗವಾಗಿ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಏರಿ್ಡಸಿದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಶಿಕ್ಷಕರುಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಬಹುಮಾನವನ್ನು ಸಹ ವಿತರಿಸಲಾಯಿತು, ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಮೀನಾಕ್ಷಿ ಬಣ್ಣದ ಭಾವಿ ರವರು ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡು ಕ್ಲಬ್ಬಿನ ಎಲ್ಲಾ ಪದಾಧಿಕಾರಿಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಿಕೊಟ್ಟರು ಇದೇ ವೇಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಗುರು ಶಿಷ್ಯರ ಬಾಂಧವ್ಯವನ್ನು ಇನ್ನಷ್ಟು ಗಟ್ಟಿ ಗೊಳಿಸುವ ವಾತಾವರಣ ಸೃಷ್ಟಿಯಾಗಲು ಇಂತಹ ಕಾರ್ಯಕ್ರಮ ಅತ್ಯಂತ ಸಹಕಾರಿ ಯಾಗಿದೆ ಎಂದರು, ಇದರಲ್ಲಿ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಪಾಲಕರು ಸಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು, ಅಲ್ಲದೆ ಕ್ಲಬ್ಬಿನ ಪದಾಧಿಕಾರಿಗಳಾದ ಕಾರ್ಯದರ್ಶಿ ಶ್ರೀದೇವಿ ಪಾಟಿಲ್, ಖಜಾಂಚಿ ಶಿಲ್ಪ ರಾಜು, ಐ ಎಸ್ ಓ ಲತಾ ಪಟ್ಟಣಶೆಟ್ಟಿ, ಎಡಿಟರ್ ಮಾಲಾ ಎಸ್ ಕಂಚಿ, ಹಿರಿಯ ಸದಸ್ಯರಾದ ಕುಲಕರ್ಣಿ, ಶರಣಪ್ಪ ಪಾಟೀಲ್, ಪಾರ್ವತಿ ಪಾಟೀಲ್ ಮತ್ತು ಶಾರದಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 