ಸುರೇಶ್ ಯಾದವ ಫೌಂಡೇಶನ್‌ದಿಂದ ಶಿಕ್ಷಕರಿಗೆ ಸನ್ಮಾನ
Teachers honored by Suresh Yadav Foundation
ಲೋಕದರ್ಶನ ವರದಿ
ಬೆಳಗಾವಿ : ಶಿಕ್ಷಕರು ಸರ್ಕಾರ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ನಿರ್ವಹಿಸುತ್ತಿದ್ದಾರೆ ಎಂದು ಸುರೇಶ್ ಯಾದವ ಫೌಂಡೇಶನ್ ಅಧ್ಯಕ್ಷರಾದ ಸುರೇಶ್ ಯಾದವ ಅವರು ಹೇಳಿದರು. ನಗರದ ರಾಮತೀರ್ಥ ನಗರದಲ್ಲಿ ಸುರೇಶ್ ಯಾದವ ಫೌಂಡೇಶನ್ ವತಿಯಿಂದ ಗುರುಪೂರ್ಣಿಮೆಯ ಅಂಗವಾಗಿ ಶಿಕ್ಷಕರಿಗೆ ಸನ್ಮಾನಿಸಿ ಅವರು ಮಾತನಾಡಿದರು,
ಕಳೆದ ಒಂದು ತಿಂಗಳಿನಿಂದ ಶಿಕ್ಷಕ ಸಿಬ್ಬಂದಿ ತಮ್ಮ ಕುಟುಂಬದವರಿಂದ ದೂರವಿದ್ದು, ಸರ್ಕಾರ ನೀಡಿರುವ ಖಋ ಕಾರ್ಯವನ್ನು ಶ್ರದ್ಧೆಯಿಂದ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮನೆ ಮನೆಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಅಗತ್ಯ ಮಾಹಿತಿ ನೀಡಿ, ಖಋ ಅರ್ಜಿಗಳನ್ನು ಭರ್ತಿ ಮಾಡುವ ಮೂಲಕ ಶಿಕ್ಷಕರು ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಅವರ ಈ ನಿಸ್ವಾರ್ಥ ಸೇವೆಯನ್ನು ಗೌರವಿಸುವ ಉದ್ದೇಶದಿಂದ ರಾಮತೀರ್ಥ ನಗರದ ನಿವಾಸಿಗಳು ಶಿಕ್ಷಕರಿಗೆ ಸನ್ಮಾನಿಸಿ ಶುಭಾಶಯ ಕೋರಿದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರವೀಣ ಪಾಟೀಲ, ಸಂಜಯ ಪವಾರ್, ಸುನಂದಾ ಉಪಾಧ್ಯೆ, ರಾಜೇಶ್ವರಿ ಖನಗನ್ನಿ, ಶ್ರೀದೇವಿ ಕರ್ಲಿಗನವರ, ಸರ್ವಮಂಗಳಾ ದೇವರಮನಿ, ಶಾಂತಾ ಕುಪಾಟಿ, ನಿರ್ಮಲಾ ಯಮಕನಮರಡಿ ಹಾಗೂ ಇತರರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 