ಶಿಕ್ಷಕರ ಜವಾಬ್ದಾರಿ ಮಕ್ಕಳನ್ನು ರೂಪಿಸುವಲ್ಲಿ ಪ್ರಮುಖ: ಡಾ. ವೀಣಾ ಬಿರಾದಾರ
Teachers play a pivotal role in shaping children: Dr. Veena Biradar
ಲೋಕದರ್ಶನ ವರದಿ
ಧಾರವಾಡ, ಸೆ.6: ವಿದ್ಯಾರ್ಥಿಗಳಲ್ಲಿ ಜ್ಞಾನ, ಶಿಸ್ತು, ಮೌಲ್ಯಗಳು ಹಾಗೂ ಆತ್ಮವಿಶ್ವಾಸ ಬೆಳೆಸಿ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಶ್ರೀ ಸಾಯಿ ಪದವಿಪೂರ್ವ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಅಧ್ಯಕ್ಷೆ ಡಾ. ವೀಣಾ ಬಿರಾದಾರ ಹೇಳಿದರು.
ನಗರದ ಶ್ರೀ ಸಾಯಿ ಪದವಿಪೂರ್ವ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಶ್ರೇಷ್ಠ ಶಿಕ್ಷಣ ತಜ್ಞ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷೆ ಡಾ. ವೀಣಾ ಬಿರಾದಾರ ಹಾಗೂ ನಿರ್ದೇಶಕ ಡಾ. ಎಸ್.ಬಿ. ಗಾಡಿ ಅವರು ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ನಂತರ ಮಾತನಾಡಿದ ಡಾ. ವೀಣಾ ಬಿರಾದಾರ, ಶಿಕ್ಷಕರು ಸಮಾಜದ ಪ್ರತಿಬಿಂಬವಾಗಿದ್ದು, ಅವರ ಕರ್ತವ್ಯನಿಷ್ಠೆ ಮತ್ತು ಪರಿಶ್ರಮ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಕರು ಕೇವಲ ಪಾಠ ಬೋಧಿಸುವವರಾಗಿರದೆ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಮಾರ್ಗದರ್ಶಕರಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರಿಗೆ ಗೌರವ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಕೃತಜ್ಞತೆ ಅರ್ಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಡಾ. ಎಸ್.ಬಿ. ಗಾಡಿ, ಪ್ರಾಚಾರ್ಯ ನಾಗರಾಜ ಶಿರೂರ, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 