ತೆಲಂಗಾಣ: ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಪ್ರಾರಂಭ
ಹೈದರಾಬಾದ್, ಜ 22: ರಾಜ್ಯದ 120 ಪುರಸಭೆ ಮತ್ತು 9 ಮಹಾನಗರ ಪಾಲಿಕೆಗಳಿಗೆ ಬುಧವಾರ ಬೆಳಿಗ್ಗೆ ಮತದಾನ ಪ್ರಾರಂಭವಾಗಿದೆ.
7,961 ಮತದಾನ ಕೇಂದ್ರಗಳಲ್ಲಿ ಪ್ರಾರಂಭವಾಗಿರುವ ಮತದಾನವು ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ.
ಸುಮಾರು 50 ಲಕ್ಷ ಮತದಾರರು ಟಿಆರ್ಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಪುರಸಭೆಗಳು ಮತ್ತು ಪಾಲಿಕೆಗೆಳ ಒಟ್ಟು 2,971 ವಾರ್ಡ್ಗಳಲ್ಲಿ, 83 ವಾರ್ಡ್ಗಳಿಗೆ ಚುನಾವಣೆ ನಡೆಯದೆ ಸರ್ವಾನುಮತದಿಂದ ಆಯ್ಕೆಯಾಗಿದೆ. ಉಳಿದಂತೆ 12,926 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ರಾಜ್ಯ ಚುನಾವಣಾ ಆಯುಕ್ತ ವಿ. ನಾಗಿ ರೆಡ್ಡಿ, ಚುನಾವಣೆಯನ್ನು ಶಾಂತವಾಗಿ ನಡೆಸಲು 55,ಸಾವಿರ ಸಿಬ್ಬಂದಿಯೊಂದಿಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 