ತಾಳೂರು ಮಾರ್ಗದಲ್ಲಿ ಬಸ್ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ
Temporary restriction on bus movement on the Talur route
ಬಳ್ಳಾರಿ 17 : ತಾಳೂರು ಗ್ರಾಮಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಆದೇಶ ಹೊರಡಿಸಿದ್ದಾರೆ.
ಕಾಮಗಾರಿಯ ವಿವರ
ಲೋಕೋಪಯೋಗಿ ಇಲಾಖೆಯ ಕೆಎಂಆರ್ಸಿ ಯೋಜನೆಯಡಿ ರಾಜ್ಯ ಹೆದ್ದಾರಿ-61 ಮತ್ತು ರಾಜ್ಯ ಹೆದ್ದಾರಿ-128 ಸಂಪರ್ಕಿಸುವ ಸೇರುವ ದೇವದುರ್ಗ-ಅಮರಾಪುರ-ಭೋಗಾವತಿ-ಹಿರೇಕೋಟ್ನೇಕಲ್-ತಾಳೂರು-ಬಳ್ಳಾರಿ-ರೂಪನಗುಡಿ-ಚೆಳ್ಳಗುರ್ಕಿ ರಸ್ತೆಯ ಚತುಷ್ಪಥ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಈ ಯೋಜನೆಯ ಭಾಗವಾಗಿ ಕೊರ್ರಗುಂದಿ-ಹಂದ್ಯಳ ಗ್ರಾಮಗಳ ಮಧ್ಯೆ ಎಲ್.ಎಲ್.ಸಿ. ಕಾಲುವೆಗೆ ಅಡ್ಡವಾಗಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರದಿಂದ ಕಾಮಗಾರಿಗೆ ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ವರದಿ ಸಲ್ಲಿಸಿತ್ತು. ಅದರ ಆಧಾರದ ಮೇಲೆ ಮೋಟಾರು ವಾಹನ ಕಾಯ್ದೆ-1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಗಳು-1989ರ ನಿಯಮ 221(ಎ)(5)ರ ಅನ್ವಯ ಈ ಆದೇಶ ಹೊರಡಿಸಲಾಗಿದೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 