ಸ್ವೀಪ್ ಸಮಿತಿ ವತಿಯಿಂದ ಟೆನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿ

ಗದಗ 24:-ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್ ) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲಿಕರಣ ಕ್ರೀಡಾ ಇಲಾಖೆ ವತಿಯಿಂದ ಮಾಧ್ಯಮದವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗಳ ಜೊತೆ ಟೆನಿಸಬಾಲ್ ಕ್ರಿಕೆಟ್ ಪಂದ್ಯಾವಳಿಯು ಬುಧವಾರ ನಡೆಯಿತು.  

ನಗರದ ವಿ.ಡಿ.ಎಸ್‌. ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮಾಧ್ಯಮ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಯವರು ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಡಿದರು.  

ಪಂದ್ಯದಲ್ಲಿ 52 ರನ್‌ಗಳ ಅಂತರ ಮೂಲಕ ಆರೋಗ್ಯ ಇಲಾಖೆ ಸಿಬ್ಬಂದಿ ಜಯ ಸಾಧಿಸಿದರು. ಮೊದಲು ಬ್ಯಾಟ್ ಮಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗಳು 111  ರನ್ ಗಳಿಸಿದರು.       ಇದಕ್ಕೆ ಮಾಧ್ಯಮ ತಂಡದವರು 6 ವಿಕೆಟ್‌ಗೆ 59 ರನ್ ಗಳಿಸಿ ಪರಾಭವಗೊಂಡರು.  

ಏಪ್ರಿಲ್ 25 ರಂದು ಬೆಳಿಗ್ಗೆ 7 ಗಂಟೆಗೆ  ನಗರದ ವಿ.ಡಿ.ಎಸ್‌. ಮೈದಾನದಲ್ಲಿ ಮಾಧ್ಯಮ ತಂಡ-2 ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಂಡಗಳ ಕ್ರಿಕೆಟ್ ಪಂದ್ಯಾಟ ನಡೆಯಲಿದೆ.  

ಮತದಾನದ ಮಹತ್ವದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವುದು ಹಾಗೂ ಶೇಕಡವಾರು ಮತದಾನ ಹೆಚ್ಚಳಕ್ಕೆ ಸ್ವೀಪ್ ಸಮಿತಿ ವತಿಯಿಂದ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶರಣು ಗೋಗೇರಿ ಅವರು ಮಾಹಿತಿ ನೀಡಿದ್ದಾರೆ.