ನಲ್ಗೊಂಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮೃತರು, ಮೂವರಿಗೆ ಗಂಭೀರ ಗಾಯ
Terrible road accident in Nalgonda district: Three dead, three seriously injured
ನಲ್ಗೊಂಡ, ಜೂನ್ 19: ನಲ್ಗೊಂಡ ಜಿಲ್ಲೆಯ ಪೆದ್ದವೂರ ಮಂಡಲದ ರಾಮಣ್ಣಗುಡೆಂ ಸಮೀಪ ಗುರುವಾರ ಮಧ್ಯರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಮತ್ತ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೂ ಮೂವರು ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ.
ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ನಾಗಾರ್ಜುನ ಸಾಗರ ಪ್ರದೇಶ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯ ಮುಪ್ಪಳ್ಳ ಮಂಡಲದ ಕಾಕರ್ಲಪಾಲೆಂ ಗ್ರಾಮದ ನಿವಾಸಿಗಳಾದ ಕಾಕರ್ಲ ಥಾಮಸ್ ಹಾಗೂ ಅವರ ಪುತ್ರ ಪ್ರಕಾಶ್ ರಾವ್ ಎಂದು ಗುರುತಿಸಲಾಗಿದೆ. ಮೂರನೇ ಮೃತ ವ್ಯಕ್ತಿ ಸಾಯಿಕುಮಾರ್ ಆಗಿದ್ದು, ಅವರು ವರಂಗಲ್ನ ಎಸ್ಎಲ್ಬಿಸಿ (SLBC) ಯೋಜನೆಯಲ್ಲಿ ಸೈಟ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 