ಅಂತರರಾಷ್ಟ್ರೀಯ

ಗುರುದ್ವಾರದ ಸುತ್ತಮುತ್ತ ಭಯೋತ್ಪಾದಕರ ದಾಳಿ

ಗುರುದ್ವಾರದ ಸುತ್ತಮುತ್ತ ಭಯೋತ್ಪಾದಕರ ದಾಳಿ

ಚಂಡೀಗಡ: ಜೂನ್ 18 : ಅಫ್ಘಾನಿಸ್ತಾನದ ಕಾಬೂಲ್ ನಲ್ಲಿರುವ ಗುರುದ್ವಾರ ಕರ್ತೆ ಪರ್ವಾನ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಗುರುದ್ವಾರ ಸಾಹಿಬ್ ಆವರಣದಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ.

ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ, ಗುರುದ್ವಾರ ಕಾರ್ಟೆ ಪರ್ವಾನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ಅಫ್ಘಾನಿಸ್ತಾನದಲ್ಲಿರುವ ಸಿಖ್ಖರಿಗೆ ಜಾಗತಿಕವಾಗಿ ಬೆಂಬಲ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಕಾಬೂಲ್ ನಿಂದ ಪವಿತ್ರ ಗುರುದ್ವಾರದ ಮೇಲೆ ದಾಳಿಯಿಂದಾಗಿ ತೀವ್ರ ಕಳವಳಕ್ಕೀಡಾಗಿದ್ದೇವೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ಕಾಯುತ್ತಿದ್ದೇವೆ ಎಂದು ದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿದೆ.

ಸುದ್ದಿ ಓದಿ