ಕ್ರೀಡೆ

ಟೆಸ್ಟ್ ಶ್ರೇಯಾಂಕ: 2ನೇ ಸ್ಥಾನದಲ್ಲಿ ರವಿಚಂದ್ರನ್ ಅಶ್ವಿನ್

ಟೆಸ್ಟ್ ಶ್ರೇಯಾಂಕ: 2ನೇ ಸ್ಥಾನದಲ್ಲಿ ರವಿಚಂದ್ರನ್ ಅಶ್ವಿನ್

ದುಬೈ: ಮಾರ್ಚ್ 30 : ಭಾರತ ತಂಡದ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಬುಧವಾರ ಪ್ರಕಟವಾದ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ಶ್ರೇಯಾಂಕದಲ್ಲಿ 341 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಏರಿದ್ದಾರೆ.

ಇತ್ತೀಚಿನ ಐಸಿಸಿ ಶ್ರೇಯಾಂಕದ ಪ್ರಕಾರ, ರವೀಂದ್ರ ಜಡೇಜಾ 385 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. 336 ಅಂಕಗಳನ್ನು ಹೊಂದಿರುವ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಬದಲಿಗೆ ಅಶ್ವಿನ್ ನಂ.2 ಸ್ಥಾನದಲ್ಲಿದ್ದಾರೆ.

ಬ್ಯಾಟಿಂಗ್ ಪಟ್ಟಿಯಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕ್ರಮವಾಗಿ ಎಂಟು ಮತ್ತು ಹತ್ತನೇ ಸ್ಥಾನಕ್ಕೆ ಕುಸಿದರೆ, ರಿಷಬ್ ಪಂತ್ ಟಾಪ್-10 ರಿಂದ ಹೊರಬಿದ್ದು ಹನ್ನೊಂದನೇ ಸ್ಥಾನದಲ್ಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ, ಸ್ಪಿನ್ನರ್ ಅಶ್ವಿನ್ ಮತ್ತು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕ್ರಮವಾಗಿ ಎರಡು ಮತ್ತು ನಾಲ್ಕನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅಗ್ರಸ್ಥಾನದಲ್ಲಿದ್ದಾರೆ.

ಸುದ್ದಿ ಓದಿ