ರಾಯಬಾಗ

ಪ್ರತಿಯೊಬ್ಬರಲ್ಲಿಯೂ ರಾಷ್ಟ್ರಾಭಿಮಾನ ಬೆಳೆಸುವ ಉದ್ದೇಶದಿಂದ “ಹರ್ ಘರ್ ತಿರಂಗಾ” ಅಭಿಯಾನ

ಪ್ರತಿಯೊಬ್ಬರಲ್ಲಿಯೂ ರಾಷ್ಟ್ರಾಭಿಮಾನ ಬೆಳೆಸುವ ಉದ್ದೇಶದಿಂದ “ಹರ್ ಘರ್ ತಿರಂಗಾ” ಅಭಿಯಾನ


ರಾಯಬಾಗ 14: ಪ್ರತಿಯೊಬ್ಬರಲ್ಲಿಯೂ ದೇಶ ಭಕ್ತಿ ಹಾಗೂ ರಾಷ್ಟ್ರಾಭಿಮಾನ ಬೆಳೆಸುವ ಉದ್ದೇಶದಿಂದ “ಹರ್ ಘರ್ ತಿರಂಗಾ” ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮನೆಮನೆಗಳಲ್ಲೂ ರಾಷ್ಟ್ರ ಧ್ವಜ ಹಾರಿಸುವ ಮೂಲಕ ದೇಶದ ಏಕತೆ, ಅಖಂಡತೆ ಹಾಗೂ ಸಾರ್ವಭೌಮತ್ವಕ್ಕೆ ಗೌರವ ಸಲ್ಲಿಸಬೇಕು ಎಂದು ನಂದಿಕುರಳಿ ಪಂಚಲಿಂಗೇಶ್ವರ ತಪೋವನದ ವೀರಭದ್ರ ಮಹಾಸ್ವಾಮೀಜಿ ಹೇಳಿದರು.   

ಸ್ವಾತಂತ್ಯ್ರೋತ್ಸವ ಅಂಗವಾಗಿ ಪಟ್ಟಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ “ಹರ್ ಘರ್ ತಿರಂಗಾ” ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು ರಾಷ್ಟ್ರ ಧ್ವಜ ಕೇವಲ ಧ್ವಜವಲ್ಲ, ಅದು ದೇಶಾಭಿಮಾನ, ಸ್ವಾತಂತ್ರ್ಯ ಹಾಗೂ 

 ತ್ಯಾಗದ ಸಂಕೇತವಾಗಿದೆ. ದೇಶಕ್ಕಾಗಿ ಹೋರಾಡಿದ ಮಹನೀಯರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ ಯುವ ಜನರಲ್ಲಿ ರಾಷ್ಟ್ರೇ​‍್ರಮ ಬೆಳೆಸುವ ಕಾರ್ಯವಾಗಬೇಕು ಎಂದರು. ತಹಶೀಲ್ದಾರ ಮಹಾದೇವ ಸನಮುರಿ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸುವುದರ ಮೂಲಕ ಸ್ವಾತಂತ್ರೊತ್ಸವವನ್ನು ಸಂಭ್ರಮದಿಂದ ಆಚರಿಸಬೇಕು. ರಾಷ್ಟ್ರ ಧ್ವಜದ ಗೌರವ ಮತ್ತು ಘನತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ ಎಂದರು.  ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ರಾಷ್ಟ್ರ ಧ್ವಜವನ್ನು ಹಿಡಿದು ಯಾತ್ರೆಯಲ್ಲಿ ಪಾಲ್ಗೊಂಡರು.  

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಯಾತ್ರೆಯಲ್ಲಿ ದೇಶಭಕ್ತಿ ಘೋಷಣೆಗಳು ಮೊಳಗಿದವು. ಬಿಜೆಪಿ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಉದ್ಯಮಿ ಸದಾಶಿವ ದೇಶಿಂಗೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸದಾಶಿವ ಘೋರೆ​‍್ಡ, ಸದಾನಂದ ಹಳಿಙಗಳಿ , ಶಿವಾನಂದ ಐಹೊಳೆ, ಮಹೇಶ ಕರಮಡಿ, ಸಂಗಣ್ಣ ದತ್ತವಾಡೆ, ಮಹಾದೇವ ಬೋರಗಾಂವೆ, ಅಪ್ಪಾಸಾಹೇಬ ಬ್ಯಾಕುಡೆ, ಬಸು ಅವಣ್ಣವರ, ಮಹಾದೇವ ಕೋಳಿ, ಮಲ್ಲಪ್ಪ ಮೈಶಾಳೆ,  ಗಂಗಾಧರ ಮೈಶಾಳೆ, ವೀರೇಶ ಬ್ಯಾಕುಡೆ, ಸುರೇಶ ಕೊಕಾಟೆ  ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ