7 ರಂದು ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆಯ 25ನೇ ರಜತೋತ್ಸವ
The 25th Silver Jubilee of Sri Kalidasa Educational Institute will be celebrated on the 7th.
ಲೋಕದರ್ಶನ ವರದಿ
ಗದಗ 04: 2002 ರ ಮೇ 16 ರಂದು ನೋಂದಣಿ ಮಾಡಲ್ಪಟ್ಟ ಗದುಗಿನ ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆಯು ಮೇ 2027 ಕ್ಕೆ 25 ವರ್ಷಗಳನ್ನು ಪೂರೈಸಲಿದೆ. ಅದರ ನಿಮಿತ್ಯವಾಗಿ 2026-2027 ರ ಶೈಕ್ಷಣಿಕ ವರ್ಷವನ್ನು ರಜತೋತ್ಸವ ವರ್ಷವೆಂದು ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಜತ ಮಹೋತ್ಸವ ಸಮಿತಿ ಉಸ್ತುವಾರಿಗಳಾದ ಡಾ. ಜಿ.ಬಿ.ಪಾಟೀಲ ಅವರಿ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ,ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ ವತಿಯಿಂದ ಪ್ರಸ್ತುತ ಕನ್ನಡ/ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳು, ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರ/ ಮಹಿಳಾ ವಸತಿ ನಿಲಯಗಳನ್ನು ಮತ್ತು ಐ.ಟಿ.ಐ. ಕಾಲೇಜು ನಡೆಸಲಾಗುತ್ತಿದೆ. ಬರುವ ದಿನಮಾನಗಳಲ್ಲಿ ವೈದ್ಯಕೀಯ/ವಿಜ್ಞಾನ-ತಂತ್ರಜ್ಞಾನ, ತಾಂತ್ರಿಕ ವಿದ್ಯಾಲಯಗಳು ಮತ್ತು ಕೇಂದ್ರ ಪಠ್ಯ ಕ್ರಮದ ಶಾಲಾ-ಕಾಲೇಜುಗಳ ಸ್ಥಾಪನೆಗೆ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಗದಗ ಜಿಲ್ಲೆಯ ಜನತೆಗೆ ಕಡಿಮೆ ವೆಚ್ಚದಲ್ಲಿ ಉತ್ಕೃಷ್ಠ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಸಂಸ್ಥೆಯ ಮಹದಾಸೆಯಾಗಿದೆ.
ಆದ್ದರಿಂದ 25 ವರ್ಷಗಳ ನಮ್ಮ ಸಾಧನೆ ಯೋಜನೆಗಳನ್ನು ಈ ಸಮಾರಂಭದ ಮೂಲಕ ಸಮಾಜ ಮತ್ತು ಸಾರ್ವಜನಿಕರ ಗಮನಕ್ಕೆ ತರಲು ಬಯಸಲಾಗಿದೆ ಎಂದರುನಿವೃತ್ತ ನ್ಯಾಯಾಧೀಶರಾದ ಎಸ್.ಜಿ.ಪಲ್ಲೇದ ಅವರು ಮಾತನಾಡಿ, ರಜತ ಮಹೋತ್ಸವದ ಅಂಗವಾಗಿ ಇದೇ ಜೂನ್ 7 ರಂದು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಶ್ರೀಗಳು ತಮ್ಮ ಅಮೃತ ಹಸ್ತದಿಂದ ರಜತೋತ್ಸವದ ವಿಧಾಯಕ ಕಾರ್ಯಕ್ರಮಗಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.
ಈ ಕುರಿತಾಗಿ ಸಾಕ್ಷ್ಯಚಿತ್ರದ ಒಂದು ವಿಡಿಯೋ ಕ್ಲಿಪ್ ಕೂಡಾ ಅಂದು ಬಿಡುಗಡೆಯಾಗಲಿದೆ. ಜೊತೆಗೆ ಸಂಸ್ಥೆಯ ನೂತನ ಕಟ್ಟಡದ ಆವರಣದಲ್ಲಿ 25 ಸಸಿಗಳನ್ನು ನೆಟ್ಟು, ಬಯಲು ಆಂಜನೇಯ ದೇವಸ್ಥಾನದ ಆವರಣದ ವೇದಿಕೆಯಲ್ಲಿ ಭಕ್ತ ಸಾಗರವನ್ನು ಉದ್ದೇಶಿಸಿ ಆಶೀರ್ವವಚನ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಶ್ರೀಗಳು ಸದ್ಭಾವನಾ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಸಂತ ರಾಜಕಾರಣಿ ಮಾಜಿ ಶಾಸಕರಾದ ಡಿ.ಆರ್.ಪಾಟೀಲ ಮತ್ತು ರಾಜ್ಯ ವಿದ್ಯುತ್ ನಿಗಮದ ನಿರ್ದೇಶಕರು ಹಾಗೂ ಅಭಿಯಂತರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸಿ. ಬಸವಣ್ಣರವರಿಗೆ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎರಡನೇ ಅವಧಿಗೆ ಆಯ್ಕೆಯಾಗಿರುವ ಚಂದ್ರಶೇಖರ ನುಗ್ಗಲಿ ಇವರುಗಳನ್ನು ಆಶೀರ್ವದಿಸಿ ಸನ್ಮಾನಿಸುವರು. ಮುಂದಿನ ತಿಂಗಳಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ. ಪರೀಕ್ಷೆಗಳಲ್ಲಿ ಪ್ರತಿಶತ 90ಅ ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮ ನಡೆಯುತ್ತದೆ. ನಂತರದ ಮಾಸಗಳಲ್ಲಿ ಆದ್ಯತಾನುಸಾರ ಆಯಾ ತಿಂಗಳುಗಳ ಮಹತ್ವಕ್ಕನುಗುಣವಾಗಿ-ಆರೋಗ್ಯ ಶಿಬಿರ, ರಕ್ತದಾನ, ಯುವಕ-ಯುವತಿಯರಿಗೆ ದೇಶಿ ಕ್ರೀಡೆಗಳ ಉತ್ಸವ ಆಯೋಜನೆಗೊಳ್ಳಲಿದೆ. ಮಹಿಳೆಯರಿಗಾಗಿ ಮಹಿಳಾ ಸಬಲೀಕರಣ, ಸಾಂಸ್ಕೃತಿಕ ಸ್ಪರ್ಧಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಲಾಗುವುದು.
ಕಾನೂನು ಅರಿವು-ನೆರವು, ಅಪರಾಧ ತಡೆಯುಂತಹ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುವುದು.ಸಾವಯುವ ಕೃಷಿ ಕೌಶಲ್ಯಾಧಾರಿತ ತರಬೇತಿ, ಉದ್ಯೋಗ ಮೇಳ, ವೃತ್ತಿ ಮಾರ್ಗದರ್ಶನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಶಿಬಿರಗಳನ್ನು ರೂಪಿಸಲಾಗಿದೆ. ಈ ಎಲ್ಲ ಕಾರ್ಯಕ್ರಮಗಳೊಂದಿಗೆ ಒಂದು ದಿನದ ಜಾನಪದ ಜಾತ್ರೆ ಮತ್ತು ಪ್ರತಿ ಕಾರ್ಯಕ್ರಮಗಳಲ್ಲಿ ಸ್ಥಳೀಯ ಪ್ರತಿಭೆಗಳನ್ನು ಬಳಸಿಕೊಂಡು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ.ರಜತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಈ ಎಲ್ಲ ಚಟುವಟಿಕೆಗಳನ್ನು ಒಳಗೊಂಡ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಗುವುದು ಎಂದು ಹೇಳಿದರುಈ ಪತ್ರಿಕಾಗೋಷ್ಠಿಯಲ್ಲಿ ಬಿ. ಬಿ. ಭಾವಿಕಟ್ಟಿ, ಫಕೀರ್ಪ ಹೆಬಸೂರ, ಆರ್ ಡಿ. ಕಡ್ಲಿಕೊಪ್ಪ, ನೀಲಕಂಠ ಮರಡಿ, ವೈ. ಬಿ ಭಾನಾಪೂರ, ಆರ್ ಎಂ. ನಿಂಬನಾಯ್ಕ, ಎಸ್.ಡಿ.ಸಿಂಗಟಾಲಕೇರಿ,ಎಸ್.ಎಸ್.ಕರಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 