ವಿಜಯಪುರ

ವಿಜಯಪುರ ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು 371ಜೆ ಹೋರಾಟ ಸಮಿತಿ ಒತ್ತಾಯ

ವಿಜಯಪುರ ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು 371ಜೆ ಹೋರಾಟ ಸಮಿತಿ ಒತ್ತಾಯ
The 371-J Struggle Committee has urged the government to celebrate the Kalyana Karnataka Utsav in Vi

ಲೋಕದರ್ಶನ ವರದಿ 

  ವಿಜಯಪುರ 10: ಸರಕಾರದಿಂದ ವಿಜಯಪುರ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ಹೈದ್ರಾಬಾದ್ ವಿಮೋಚನಾ ದಿನಾಚರಣೆ (ಕಲ್ಯಾಣ ಕರ್ನಾಟಕ ಉತ್ಸವ) ಆಚರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ವಿಜಯಪುರ ಜಿಲ್ಲಾ 371 (ಜೆ) ಹೋರಾಟ ಸಮಿತಿವತಿಯಿಂದ ಗುರುವಾರ ಮನವಿ ಸಲ್ಲಿಸಿದರು. 

ಈ ಸಂದರ್ಭದಲ್ಲಿ 371 ಜೆ ಹೋರಾಟ ಸಮಿತಿಯ ವಿನೋದ ಖೇಡ ಮಾತನಾಡಿ, ಸೆಪ್ಟೆಂಬರ್ 17 ಭಾರತದ ಇತಿಹಾಸದಲ್ಲಿ ಅತ್ಯಂತ ಪ್ರಮುಖವಾದ ದಿನವಾಗಿದೆ. ನಿಜಾಮರ ಆಡಳಿತದಿಂದ ಮುಕ್ತಿ ಪಡೆದು, ಹೈದರಾಬಾದ್ ಸಂಸ್ಥಾನವು ಭಾರತ ಒಕ್ಕೂಟಕ್ಕೆ ಸೇರಿದ ಐತಿಹಾಸಿಕ ದಿನವನ್ನು ನಾವು ‘ಹೈದರಾಬಾದ್ ವಿಮೋಚನಾ ದಿನ' (ಪ್ರಸ್ತುತ ಕಲ್ಯಾಣ ಕರ್ನಾಟಕ ಉತ್ಸವ) ಎಂದು ಆಚರಿಸಿಕೊಂಡು ಬರುತ್ತಿದ್ದೇವೆ.

ವಿಜಯಪುರ ಜಿಲ್ಲೆಯು ಭೌಗೋಳಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಈ ಹೋರಾಟದ ಇತಿಹಾಸದೊಂದಿಗೆ ನಿಕಟ ನಂಟನ್ನು ಹೊಂದಿದೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜನಿಸಿದ ಸ್ವಾಮಿ ರಾಮಾನಂದ ತೀರ್ಥರು ಹೈದ್ರಾಬಾದ ವಿಮೋಚನೆಯ ಚಳುವಳಿಯ ನೇತೃತ್ವ ವಹಿಸಿ ಹೈದ್ರಾಬಾದ್ ಪ್ರಾಂತದ ವಿಮೋಚನೆಯ ಪಿತಾಮಹಾರೆನ್ನಿಸಿದ್ದಾರೆ ಅವರ ತವರು ಜಿಲ್ಲೆ ವಿಜಯಪುರದಲ್ಲಿ ಸರ್ಕಾರದಿಂದ ಹೈದ್ರಾಬಾದ್ ವಿಮೋಚನಾ ಚಳುವಳಿ ನಾಯಕರಿಗೆ ಗೌರವ ಸಲ್ಲಿಸಬೇಕೆಂದು ಆಗ್ರಹಿಸಿದರು. 


ಸುದ್ದಿ ಓದಿ