ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರ ಹಿಡಿದಿದೆ: ಜಿಗಜಿಣಗಿ
ಇಂಡಿ: ಪುರಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರ ಹಿಡಿದಿದೆ. ನಮ್ಮ ಪಕ್ಷದ ಸದಸ್ಯರು ಹಾಗೂ ಪಕ್ಷೇತರ ಸದಸ್ಯರು ಇನ್ನೀತರ ಸದಸ್ಯರು ನಮ್ಮ ಅಭ್ಯರ್ಥಿಗಳಿಗೆ ಬಹುಮತ ನೀಡಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಅವರು ಗುರುವಾರ ಪಟ್ಟಣದ ಪುರಸಭೆಯಲ್ಲಿ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಪುರಸಭೆಯ ಸದಸ್ಯರ ಚುನಾವಣೆಯಲ್ಲಿ ನಗರದ ಮಹಾಜನತೆ ನಮ್ಮ ಪಕ್ಷಕ್ಕೆ 11 ಸದಸ್ಯರನ್ನು ಗೆಲ್ಲಿಸಿದೆ. ನಮ್ಮ ಎಲ್ಲ ಸದಸ್ಯರು ಹಾಗೂ ಪಕ್ಷೇತರ ಸದಸ್ಯರು ಹಾಗೂ ನಾನೂ ಸೇರಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದೇವೆ ಎಂದರು.
ಕಾಂಗ್ರೇಸ್ ಪಕ್ಷದ ಶಾಸಕರು ಹಾಗೂ ಸದಸ್ಯರು ಮತದಾನ ಬಹಿಷ್ಕಾರ ಮಾಡಿ ಹೋಗಿದ್ದಾರೆ. ಇದು ಅವರಿಗೆ ಶೋಭೆ ತರುವಂಥದ್ದಲ್ಲ. ನಮ್ಮ, ಪಕ್ಷದವರು ಯಾವುದೇ ಅಡ್ಡ ದಾರಿಹಿಡಿಯದೇ ಮತದಾನ ಮಾಡಲು ಬಂದಿದ್ದೇವೆ. ಶಾಸಕರು ಗೂಂಡಾ ವರ್ತನೆ ಮಾಡಿ ಚುನಾವಣೆಯಲ್ಲಿ ಅಡ್ಡದಾರಿ ಹಿಡಿದಿದ್ದಾರೆ, ಸದಸ್ಯರನ್ನು ಕಿಡ್ನಾಪ್ ಮಾಡಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ನಮ್ಮ ಪಕ್ಷದ ಮುಖಂಡರು ನಾನು ಸೇರಿಕೊಂಡು ನಮ್ಮ ಎಲ್ಲ ಸದಸ್ಯರನ್ನು ಒಂದುಗೂಡಿಸಿದ್ದೇವೆ ಎಂದು ಪ್ರತಿಕ್ರಿಯಿಸಿದರು.
ಯಾರು ಗೂಂಡಾಗಿರಿ ಮಾಡುತ್ತಾರೆ, ಯಾರು ಹೇಗೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿಸುತ್ತಾರೆ? ಹೇಗೆ ಹಿಂಬಾಗಿಲಿನಿಂದ ಅಧಿಕಾರ ಹಿಡಿಯುತ್ತಾರೆ ಎಂಬುದು ಮತಕ್ಷೇತ್ರದ ಜನತೆಗೆ ಗೊತ್ತಿದೆ ನಾನು ಅದರ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ, ಕಾಸುಗೌಡ ಬಿರಾದಾರ, ಅನೀಲಗೌಡ ಬಿರಾದಾರ, ದೇವೆಂದ್ರ ಕುಂಬಾರ, ಸಂಜೀವಕುಮಾರ ದಶವಂತ ಇದ್ದರು.