’ಸೂರ್ಯ’ನ ಮೂಲಕ ಸ್ಯಾಂಡಲ್ ವುಡ್‌ಗೆ ಶಕ್ತಿ ತುಂಬಿದ ಬೆಣ್ಣೆ ಸಹೋದರರು
The Benne Brothers Energized Sandalwood with 'Surya'
ಉತ್ತರ ಕರ್ನಾಟಕದ ಯುವ ಪ್ರತಿಭೆಗಳ ’ಸೂರ್ಯ’ ಸಿನಿಮಾ ಬಿಡುಗಡೆಗೆ ದಿನ ಗಣನೆ ಆರಂಭವಾಗಿದ್ದು, ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 15ರಂದು ತೆರೆಗೆ ಬರುತ್ತಿದೆ. ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರು ನಿರ್ಮಿಸಿರುವ ’ಸೂರ್ಯ’ ಸಿನಿಮಾ ಹಾಡು ಮತ್ತು ಟ್ರೇಲರ್ ನಿಂದ ನೀರೀಕ್ಷೆ ಹುಟ್ಟಿಸಿದೆ.
ನಂದಿ ಸಿನಿಮಾಸ್ ಅಡಿಯಲ್ಲಿ ನಿರ್ಮಾಣವಾದ ‘ಸೂರ್ಯ’ ಮಾಸ್ ಲವ್ ಸ್ಟೋರಿ ಒಳಗೊಂಡ ಚಿತ್ರ. ಸ್ಲಂನಲ್ಲಿ ಬೆಳೆದ ಯುವಕನೊಬ್ಬ ತನ್ನ ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲ ಹೋರಾಟ, ಸಾಹಸ ಮಾಡುತ್ತಾನೆ ಎಂಬುದೇ ಒನ್ ಲೈನ್ ಸ್ಟೋರಿ. ಚಿತ್ರದ ನಾಯಕನಾಗಿ ಯುವನಟ ಪ್ರಶಾಂತ್, ನಾಯಕಿಯಾಗಿ ಹರ್ಷಿತಾ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಚಿತ್ರವನ್ನು ಸಾಗರ್ ದಾಸ್ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಬಗ್ಗೆ ಮಾಹಿತಿ ನೀಡಿರುವ ನಿರ್ಮಾಪಕ ಬಸವರಾಜ ಬೆಣ್ಣೆ, ?ಟ್ರೈಲರ್ ಚೆನ್ನಾಗಿ ಮೂಡಿಬಂದಿದೆ. ಪೂನಾದಲ್ಲಿ ಉದ್ಯಮ ನಡೆಸುತ್ತಿರುವ ನಾವು, ಹುಟ್ಟಿಬೆಳೆದ ಕನ್ನಡ ನಾಡಿಗೆ ಏನಾದರೂ ಕೊಡುಗೆ ನೀಡಬೇಕೆಂದು ಈ ಚಿತ್ರ ಮಾಡಿದ್ದೇವೆ’ ಎನ್ನುವರು. ಸಹೋದರ ರವಿ ಬೆಣ್ಣಿ, ?ಜನವರಿ 15 ಕ್ಕೆ ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಸಾಗರ್ ಕಥೆ ಹೇಳಿದಾಗ ಬಜೆಟ್ ಜಾಸ್ತಿ ಅನಿಸಿತ್ತು. ಸಿನಿಮಾ ನೋಡಿದಾಗ ನಮ್ಮ ಹಣ ಎಲ್ಲೂ ಹೋಗಿಲ್ಲ ಅನ್ನಿಸಿತು’ ಎಂದರು.ಉತ್ತರ ಕರ್ನಾಟಕ, ಬೆಂಗಳೂರು ಸುತ್ತಮುತ್ತ ಹಾಗೂ ಪೂನಾನಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.
ಈ ಚಿತ್ರದಲ್ಲಿ ನಟರಾದ ಪ್ರಮೋದ್ ಶೆಟ್ಟಿ, ಶೃತಿ, ಆರ್ಮುಗಂ ರವಿಶಂಕರ್ ವಿಭಿನ್ನ ಪಾತ್ರ ನಿರ್ವಹಿಸಿದ್ದಾರೆ. ಉಳಿದ ತಾರಾಗಣದಲ್ಲಿ . ಟಿ.ಎಸ್. ನಾಗಾಭರಣ, ಬಲ ರಾಜವಾಡಿ, ಭಜರಂಗಿ ಪ್ರಸನ್ನ, ಕುಂಕುಮ್ ಹರಿಹರ, ದೀಪಿಕಾ, ಕಡ್ಡಿಪುಡಿ ಚಂದ್ರು ಮುಂತಾದವರು ಇದ್ದಾರೆ. ಬಿ.ಸುರೇಶ್ ಜೊತೆ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದ ಸಾಗರ್ ದಾಸ್ ಸೂರ್ಯ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದ ಐದು ಹಾಡುಗಳಿಗೆ ಶ್ರೀ ಶಾಸ್ತ ಅವರು ಸಂಗೀತ ಸಂಯೋಜನೆ ಮಾಡಿದ್ದು, ಬಹದ್ದೂರ್ ಚೇತನ್, ಯೋಗರಾಜ ಭಟ್ ಹಾಗೂ ನಿರ್ದೇಶಕರೂ ಸಾಹಿತ್ಯ ರಚಿಸಿದ್ದಾರೆ. ಉತ್ತರ ಕರ್ನಾಟಕ ಶೈಲಿಯ ’ಕೆಂಪಾದ ಗಲ್ಲದ ಹುಡುಗಿ ...’ ಎಂಬ ಹಾಡು ಎಲ್ಲಾ ಕಡೆ ವೈರಲ್ ಆಗಿದೆ. ಮನುರಾಜ್ ಅವರ ಛಾಯಾಗ್ರಹಣ, ಮಣಿಕಂಠ ಕೆ.ವಿ. ಅವರ ಸಂಭಾಷಣೆ, ನರಸಿಂಹ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಮಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 