ಕಾರ್ಮಿಕರಿಗೆ ಪ್ರೇರಣೆಯಾದ ಸಿಇಓ ಮಾನಕರ
ಬಾಗಲಕೋಟೆ೨೦: ಕೂಲಿ ಕಾರ್ಮಿಕರೊಂದಿಗೆ ತಾವು ಸಹ ಕೆಲಸದಲ್ಲಿ ಸಾಥ ನೀಡುವ ಮೂಲಕ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗೂಬಾಯಿ ಮಾನಕರ ಕಾಮರ್ಿಕರಿಗೆ ಪ್ರೇರಣೆಯಾಗಿದ್ದಾರೆ.
ಜಿಲ್ಲಾ ಪಂಚಾಯತಿ ಹಾಗೂ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಇತ್ತೀಚೆಗೆ ಹುನಗುಂದ ತಾಲೂಕಿನ ಮುಗುನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜಮೀನಿನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಪಿಆರ್ಇಡಿ ವತಿಯಿಂದ ನಿರ್ಮಿ ಸಲಾಗುತ್ತಿರುವ ಚೆಕ್ಡ್ಯಾಂ ಕಾಮಗಾರಿ ವೀಕ್ಷಣೆಯ ಭೇಟಿ ನೀಡಿದ ಸಂದರ್ಭದಲ್ಲಿ ಸ್ವತಃ ಜಿ.ಪಂ ಸಿಇಓ ಮಾನಕರ ಅವರು ಕಾರ್ಮಿಕರೊಂದಿಗೆ ಮಣ್ಣನ್ನು ಬುಟ್ಟಿಯಲ್ಲಿ ತುಂಬಿಕೊಂಡು ಟ್ಯಾಕ್ಟರ್ಗಳಲ್ಲಿ ಹಾಕುವ ಮೂಲಕ ಕಾಮರ್ಿಕರಿಗೆ ಸಾಥ್ ನೀಡಿದರು.
ಕಾಮರ್ಿಕರಿಗೆ ಕೇವಲ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಸಿಗುವದಲ್ಲದೇ ತಮ್ಮ ಜಮೀನುಗಳಲ್ಲಿ ಕೃಷಿ ಹಾಗೂ ತೋಟಗಾರಿಕೆಯ ವಿವಿಧ ಚಟುವಟಿಕೆಗಳನ್ನು ಕೈಗೊಂಡು ತಾವೇ ಕೆಲಸ ಮಾಡಿ ಕೂಲಿಯನ್ನು ಸಹ ಪಡೆದುಕೊಳ್ಳಬಹುದಾಗಿದೆ. ಉದ್ಯೋಗ ಖಾತರಿ ಯೋಜನೆ ದುಡಿಯುವ ಕೈಗಳಿಗೆ ಮಾತ್ರವಲ್ಲದೇ ರೈತರಿಗೂ ವರದಾನವಾಗಿ ಪರಿಣಮಿಸಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮಾನಕರ ತಿಳಿಸಿದರು. ಕೃಷಿ ಇಲಾಖೆಯಿಂದ ನಿಮರ್ಾಣಗೊಳ್ಳುತ್ತಿರುವ ಕೃಷಿ ಹೊಂಡ ಕಾಮಗಾರಿಗಳನ್ನು ಸಹ ವೀಕ್ಷಿಸಿದರು.
ಮುಗನೂರು ವ್ಯಾಪ್ತಿಯ ಬಸರಿಕಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಶಾಲೆಗಳಿಗೆ ತೆರಳಿ ಶೌಚಾಲಯಗಳನ್ನು ವೀಕ್ಷಿಸಿದರು. ನಂತರ ವಿವಿಧ ತರಗತಿಗಳ ಕೊಠಡಿಗೆ ತೆರಳಿ ಮಕ್ಕಳ ಕಲಿಕಾ ಮಟ್ಟವನ್ನು ಪರಿಶೀಲಿಸಿದರು. ಸರಕಾರದಿಂದ ಸಿಗುವ ಸೌಲಭ್ಯಗಳ ದೊರೆಯುತ್ತಿರುವ ಬಗ್ಗೆ ಕೇಳಿದರು.
ನಂತರ ಬಸರಿಕಟ್ಟಿಯಿಂದ ಹೊರಟಾಗ ಹಾದಿಯಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ನಡತೋಪುಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಎಂ.ಎಂ.ಸಜ್ಜನ ಅವರು ಪ್ರಸಕ್ತ ಸಾಲಿನಲ್ಲಿ 190 ಕಿ.ಮೀ ನವರೆಗೆ ಗುರಿ ಹೊಂದಲಾಗಿತ್ತು. ಈ ಪೈಕಿ 192 ಕಿ.ಮೀ ನಷ್ಟು ಗಿಡಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು.
ರಕ್ಕಸಗಿ ಗ್ರಾ.ಪಂ ವ್ಯಾಪ್ತಿಯ ಹೊನ್ನರಹಳ್ಳಿ ಗ್ರಾಮಕ್ಕೆ ತೆರಳಿದ ಮಾನಕರ ಸ್ವ-ಸಹಾಯ ಗುಂಪುಗಳಿಗೆ ನಿಮರ್ಿಸಲಾದ ವರ್ಕಶೆಡ್ ವೀಕ್ಷಿಸಿದರು. ವರ್ಕಶೆಡ್ನಲ್ಲಿರುವ ಸ್ವ-ಸಹಾಯ ಗುಂಪುಗಳಿಗೆ ಇರುವ ಸೌಲಭ್ಯಗಳ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು. ಅವರು ತಯಾರಿಸಿದ ಬ್ಯಾಗ್ಗಳನ್ನು ವೀಕ್ಷಿಸಿ, ವಿವಿಧ ಕೌಶಲ್ಯ ತರಬೇತಿ, ಸಾಲ ಸೌಲಭ್ಯ, ಆಥರ್ಿಕ ಸಹಾಯಧನ, ತಿಂಡಿ ತಿನಿಸುಗಳ ತಯಾರಿಸುವದರಿಂದ ಉತ್ತಮ ಆದಾಯ ಪಡೆಯಬಹುದಾಗಿದೆ ಎಂದು ಸಿಇಓ ಮಾನಕರ ತಿಳಿಸಿದರು.
ಸ್ವ-ಸಹಾಯ ಗುಂಪುಗಳಿಗೆ ವರ್ಕಶೆಡ್ ನಿಮರ್ಿಸಿಕೊಡಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗಾಗಲೇ ಒಟ್ಟು 6 ವರ್ಕಶೆಡ್ ಕಾಮಗಾರಿಗಳು ನಡೆಸಲಾಗುತ್ತಿದೆ. ಜಮಖಂಡಿ ತಾಲೂಕಿನ ಕಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 2, ಸಾವಳಗಿಯಲ್ಲಿ 1, ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ಹಾಗೂ ತುಳಸಿಗೇರಿಯಲ್ಲಿ ತಲಾ 1 ಹಾಗೂ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಹೊನ್ನರಹಳ್ಳಿಯಲ್ಲಿ 1 ನಿಮರ್ಿಸಲಾಗುತ್ತಿದೆ ಎಂದು ಮಾನಕರ ತಿಳಿಸಿದರು.
ಭೇಟಿ ಸಂದರ್ಭದಲ್ಲಿ ಹುನಗುಂದ ತಾ.ಪಂ ಕಾರ್ಯನಿವರ್ಾಹಕ ಅಧಿಕಾರಿ ಪುಷ್ಪಾ ಕಮ್ಮಾರ, ಪಂಚಾಯತ ರಾಜ್ ಇಲಾಖೆಯ ಸಹಾಯಕ ಅಭಿಯಂತರ ಎಂ.ಎಂ.ಪಾಟೀಲ, ಎಡಿಪಿಸಿಯ ನಾಗರಾಜ ರಾಜನಾಳ, ಜಿಲ್ಲಾ ಐಇಸಿ ಸಂಯೋಜಕ ಪವನ ಕುಲಕಣರ್ಿ, ಜಿಲ್ಲಾ ಎಂ.ಐ.ಎಸ್ ಸಂಯೋಜಕ ಉಜ್ವಲ ಸಕ್ರಿ, ತಾಲೂಕಾ ಐಇಸಿ ಸಂಯೋಜಕ ಸುವರ್ಣ ಭಜಂತ್ರಿ, ತಾಂತ್ರಿಕ ಸಯೋಜಕ ವಿಜಯಕುಮಾರ ಚಿಂದಿ, ಪಂಚಾಯತ ಅಭಿವೃದ್ದಿ ಅಧಿಕಾರಿಗಳಾದ ಎಂ.ಎಸ್.ಗೋಡಿ, ಆವಿನ ಹುಲ್ಲಪ್ಪ ಸೇರಿದಂತೆ ಇತರರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 