ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಮುಖ್ಯಮಂತ್ರಿ ಮನವಿ
ಬೆಂಗಳೂರು, ಜೂ 15: ಮಹದಾಯಿ ಹಾಗೂ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವ ಬಗ್ಗೆ ಸಂಬಂಧಿಸಿದ ರಾಜ್ಯಗಳ ಸಚಿವರ ಸಭೆ ಕರೆದು ಚರ್ಚಿಸುವುದಾಗಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಭರವಸೆ ನೀಡಿದ್ದಾರೆ. ದೆಹಲಿಯ ಜಲಭವನದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು. ಮೇಕೆದಾಟು ಅಣೆಕಟ್ಟೆ ನಿರ್ಮಾಣ ಯೋಜನೆಗೆ ಅನುಮತಿ ನೀಡುವಂತೆ ಹಾಗೂ ಕೃಷ್ಣಾ ನ್ಯಾಯಾಧೀಕರಣದ ಆದೇಶ ಹಾಗೂ ಮಹದಾಯಿ ನ್ಯಾಯಾಧೀಕರಣದ ಆದೇಶಗಳ ಗಜೆಟ್ ಅಧಿಸೂಚನೆ ಹೊರಡಿಸಿ, ಶೀಘ್ರವೇ ಈ ಯೋಜನೆಗಳ ಅನುಷ್ಠಾನಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಿದರು. ಕರ್ನಾಟಕ ರಾಜ್ಯವು ಕಳೆದ ಜನವರಿ 18, 2019 ರಂದು ಕೇಂದ್ರ ಸರ್ಕಾರಕ್ಕೆ ಮೇಕೆದಾಟು ಸಮತೋಲಿತ ಅಣೆಕಟ್ಟು ಹಾಗೂ ಕುಡಿಯುವ ನೀರಿನ ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಿದೆ. ಈ ಯೋಜನೆಯಿಂದ 4.75 ಟಿಎಂಸಿ ನೀರನ್ನು ಬೆಂಗಳೂರು ನಗರದ ಕುಡಿಯುವ ನೀರು ಪೂರೈಕೆಗೆ ಬಳಸುವ ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಉದ್ದೇಶವಿದೆ. ಇದು ಕರ್ನಾಟಕದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳಲು ಕರ್ನಾಟಕದ ನೆಲದಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಯಾದ್ದರಿಂದ ಈ ಯೋಜನೆಗೆ ಅನುಮತಿ ನೀಡಲು ತಮಿಳುನಾಡು ಸರ್ಕಾರದ ಅಭಿಪ್ರಾಯ ಪಡೆಯುವ ಅಗತ್ಯವಿರುವುದಿಲ್ಲ ಎಂಬ ಮಾಹಿತಿ ನೀಡಿದ್ದಾರೆ ಆದ್ದರಿಂದ ಶೀಘ್ರವೇ ಈ ಯೋಜನೆಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಅವರು ಕೇಂದ್ರ ಸಚಿವರನ್ನು ಕೋರಿದರು. ಕೃಷ್ಣಾ ಜಲವಿವಾದ ನ್ಯಾಯಾಧೀಕರಣ-2, ರಾಜ್ಯಕ್ಕೆ 166 ಟಿಎಂಸಿ ನೀರನ್ನು ನೀರಾವರಿ ಮತ್ತು ಇತರ ಉದ್ದೇಶಗಳಿಗಾಗಿ ಹಂಚಿಕೆ ಮಾಡಿದೆ. ಆದರೆ ಕೃಷ್ಣಾ ನ್ಯಾಯಾಧೀಕರಣದ ಆದೇಶ ಗೆಜೆಟ್ ಅಧಿಸೂಚನೆ ಹೊರಡಿಸದ ಕಾರಣ ರಾಜ್ಯದ ಪಾಲಿನ ನೀರಿನ ಸದ್ಬಳಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಶೀಘ್ರವೇ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದರು. ಮಹದಾಯಿ ಜಲ ವಿವಾದ ನ್ಯಾಯಾಧೀಕರಣವೂ ಸಹ ರಾಜ್ಯಕ್ಕೆ 13.2 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಈ ಕುರಿತು ಇನ್ನೂ ಗೆಜೆಟ್ ಅಧಿಸೂಚನೆ ಹೊರಡಿಸದ ಕಾರಣ ಬಹುಕಾಲದಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ ನಗರಗಳು ಹಾಗೂ ದಾರಿಯಲ್ಲಿರುವ ಪಟ್ಟಣ, ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಕಳಸಾ-ಬಂಡೂರಿ ನಾಲಾ ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾವೇರಿ ಜಲ ವಿವಾದ ನ್ಯಾಯಾಧೀಕರಣದ ಹಂಚಿಕೆಗೆ ಸಂಬಂಧಿಸಿದಂತೆ, ನ್ಯಾಯಾಲಯದಲ್ಲಿ ಕಾವೇರಿ ಜಲಾನಯನ ಪ್ರದೇಶದ ರಾಜ್ಯಗಳು ಪ್ರಕರಣಗಳನ್ನು ದಾಖಲಿಸಿದ್ದಾಗ್ಯೂ, ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಡುವ ಷರತ್ತು ವಿಧಿಸಿ, ಗಜೆಟ್ ಅಧಿಸೂಚನೆ ಹೊರಡಿಸಲಾಗಿತ್ತು. ಅದೇ ರೀತಿ ಕೃಷ್ಣಾ ಹಾಗೂ ಮಹದಾಯಿ ನ್ಯಾಯಾಧಿಕರಣಗಳ ನೀರು ಹಂಚಿಕೆ ಕುರಿತಂತೆ ನ್ಯಾಯಾಲಯದ ತೀಪು ನಿರೀಕ್ಷಿಸಿ, ಗಜೆಟ್ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 