ಹಾವೇರಿ

ಸಂವಿಧಾನ ಜೀವನಕ್ಕೆ ದಾರೀದೀಪ-ಮಹಿಳೆಯರ ಸುರಕ್ಷತೆ ಎಲ್ಲರ ನೈತಿಕ ಹೊಣೆ

ಸಂವಿಧಾನ ಜೀವನಕ್ಕೆ ದಾರೀದೀಪ-ಮಹಿಳೆಯರ ಸುರಕ್ಷತೆ ಎಲ್ಲರ ನೈತಿಕ ಹೊಣೆ

ಲೋಕದರ್ಶನ ವರದಿ

               ಹಾವೇರಿ 26:  ಸಂವಿಧಾನವು ನಮ್ಮ ಜೀವನಕ್ಕೆ ದಾರೀದೀಪವಾಗಿದ್ದು, ಸಮಾಜದ ಎಲ್ಲ ವರ್ಗದ ಜನರನ್ನು ಸಮಾನವಾಗಿ ಕಾಣುವ ತತ್ವವನ್ನು ಒಳಗೊಂಡಿದೆ. ಪ್ರತಿಯೊಬ್ಬರೂ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿದಾಗ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವೀಂದ್ರ​‍್ಪ ಎನ್‌.  ಅವರು ಹೇಳಿದರು. 

ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆಹಿ2026 ಮತ್ತು ಅಂತರಾಷ್ಟ್ರೀಯ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನಾ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಸಂವಿಧಾನವು ಸ್ತ್ರೀ-ಪುರುಷರಿಗೆ ಸಮಾನ ಹಕ್ಕುಗಳನ್ನು ನೀಡಿದ್ದರೂ, ಇಂದಿಗೂ ಮಹಿಳೆಯರ ಮೇಲೆ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ದೌರ್ಜನ್ಯಗಳು ನಡೆಯುತ್ತಿರುವುದು ವಿಷಾದನೀಯ. ಮಹಿಳೆಯರಿಗೆ ಗೌರವ, ಸುರಕ್ಷತೆ ಹಾಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದು ಕೇವಲ ಕಾನೂನಿನ ಜವಾಬ್ದಾರಿಯಲ್ಲ, ಸಮಾಜದ ಪ್ರತಿಯೊಬ್ಬರ ನೈತಿಕ ಹೊಣೆಗಾರಿಕೆಯಾಗಿದೆ ಎಂದರು. 

ಯಾರಿಗಾದರೂ ಕಾನೂನು ನೆರವಿನ ಅಗತ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬೇಕು ಅಥವಾ 15100 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ಉಚಿತ ಕಾನೂನು ನೆರವು ಪಡೆಯಬಹುದು ಎಂದು ಹೇಳಿದರು. 

ನೆರವು ಸಹಾಯಕ ಅಭಿರಕ್ಷಣಾ ವಕೀಲ ಎನ್‌.ಎನ್‌. ಡಿಳ್ಳೆಪ್ಪನವರ ಅವರು ಸಂವಿಧಾನ ದಿನಾಚರಣೆಯ ಮಹತ್ವ ಕುರಿತು ಉಪನ್ಯಾಸ ನೀಡಿದರು. 

ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್‌. ಅವರು ಅಧ್ಯಕ್ಷತೆ ವಹಿಸಿದ್ದರು.  ನ್ಯಾಯಾಧೀಶರಾದ  ಎಂ.ಜಿ. ಶಿವಳ್ಳಿ,   ಅಶ್ವಿನಿ ವಿಜಯ ಶಿರಿಯಣ್ಣನವರ, ಎನ್‌.ಎಂ. ರಮೇಶ ಮಹ್ಮದ್ ಅನ್ವರ ಹುಸೇನ ಮೊಗಲಾನಿ, ಹಿರಿಯ ದಿವಾಣಿ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ  ಶೈಲಜಾ ಎಚ್‌.ವಿ., ಶೋಭಾ ಬಿ.ಜಿ., ಆಕರ್ಷ್‌ ಎಂ.,

           ರಾಹುಲ್ ಅಧಿನಾಥ ನ್ಯಾಮಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಲ್‌.ವೈ. ಶಿರಕೋಳ, ಮುಖ್ಯ ಕಾನೂನು ನೆರವು ಅಭಿರಕ್ಷಣಾ ವಕೀಲ ವಿ.ಜಿ. ದೊಡ್ಡಗೌಡರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರೇವತಿ ಹೊಸಮಠ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ ದಂಡಿನ  ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ