ವಿಜಯಪುರ

ಸಂವಿಧಾನವೇ ಭಾರತದ ಏಕತೆ ಮತ್ತು ಪ್ರಜಾಪ್ರಭುತ್ವದ ಶಕ್ತಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

ಸಂವಿಧಾನವೇ ಭಾರತದ ಏಕತೆ ಮತ್ತು ಪ್ರಜಾಪ್ರಭುತ್ವದ ಶಕ್ತಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ


           ಬೀದರ್  27 : ಭಾರತೀಯ ಸಂವಿಧಾನ ದಿನದ ಅಂಗವಾಗಿ ಬೀದರ್ ನಗರದ ಡಾ. ಬಿ.ಆರ್‌. ಅಂಬೇಡ್ಕರ್ ವೃತ್ತದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಮಾತನಾಡಿದರು.

           ಸಂವಿಧಾನ ದಿನದ ಅಂಗವಾಗಿ ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಬೀದರ್‌: ಭಾರತೀಯ ಸಂವಿಧಾನ ದಿನದ ಅಂಗವಾಗಿ ಬೀದರ್ ನಗರದ ಡಾ. ಬಿ.ಆರ್‌. ಅಂಬೇಡ್ಕರ್ ವೃತ್ತದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು.

             ಈ ಸಂದರ್ಭದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ವಿಶೇಷ ಪೂಜೆ ಸಲ್ಲಿಸಿ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ​‍್ಿಸಿದರು.ನಂತರ ಮಾತನಾಡಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು,

               ಭಾಷೆ, ಧರ್ಮ, ಜಾತಿ, ಸಂಸ್ಕೃತಿ ಹಾಗೂ ಪ್ರದೇಶಗಳ ವೈವಿಧ್ಯತೆಯಿಂದ ಕೂಡಿರುವ ಭಾರತವನ್ನು ಪ್ರಜಾಪ್ರಭುತ್ವದ ಒಂದೇ ಸೂತ್ರದಲ್ಲಿ ಬಂಧಿಸಿರುವ ಮಹಾನ್ ಶಕ್ತಿ ಭಾರತೀಯ ಸಂವಿಧಾನವಾಗಿದೆ ಎಂದು ಹೇಳಿದರು.

            ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸಮಾನ ಅವಕಾಶ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಖಾತರಿಪಡಿಸುವ ಮಹತ್ವದ ದಾಖಲೆಯಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಸಂವಿಧಾನವು ಪ್ರತಿಯೊಬ್ಬರ ಗೌರವಯುತ ಬದುಕಿಗೆ ದಾರೀದೀಪವಾಗಿದೆ ಎಂದು ತಿಳಿಸಿದರು.

             ಸಂವಿಧಾನದ ಆಶಯಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಸಮಾನತೆ, ಸಹಬಾಳ್ವೆ, ಸಹೋದರತ್ವ ಮತ್ತು ಪರಸ್ಪರ ಗೌರವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ಬಲಿಷ್ಠ, ಸಮೃದ್ಧ ಹಾಗೂ ಏಕತೆಯಿಂದ ಕೂಡಿದ ಭಾರತವನ್ನು ನಿರ್ಮಿಸೋಣ ಎಂದು ಕರೆ ನೀಡಿದರು.

             ಸಂವಿಧಾನವೇ ನಮ್ಮ ಹೆಮ್ಮೆ, ಪ್ರಜಾಪ್ರಭುತ್ವವೇ ನಮ್ಮ ಶಕ್ತಿ ಎಂಬ ಸಂದೇಶದೊಂದಿಗೆ ಸಂವಿಧಾನ ದಿನದ ಶುಭಾಶಯಗಳನ್ನು ತಿಳಿಸಿದರು.ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರ ಮಾಧ್ಯಮ ಸಂಯೋಜಕ ಸಹಾಯಕ ನಾಗೇಶ ಸಿದ್ದಾ. 


ಸುದ್ದಿ ಓದಿ