ಎಸ್ಸೆಸ್ಸೆಲ್ಸಿ ಪರೀಕ್ಷೆ: ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ
ಸಿಂದಗಿ: ವಿದ್ಯಾಥರ್ಿಗಳು ಶೈಕ್ಷಣಿಕ ಅಕಾಡೆಮಿ ಸಾಧನೆ ಮಾಡಿದರೆ ಸಾಲದು, ಅದರ ಜತೆಗೆ ಬದುಕಿನ ಓದನ್ನು ಅಥರ್ೈಸಿಕೊಳ್ಳಬೇಕು ಎಂದು ಸ್ಥಳೀಯ ಸಮರ್ಥ ವಿದ್ಯಾ ವಿಕಾಸ ವಿವಿದೊದ್ದೇಶಗಳ ಸಂಸ್ಥೆಯ ಅಧ್ಯಕ್ಷ ಆರ್.ಡಿ. ಕುಲಕಣರ್ಿ ಹೇಳಿದರು.
ಸ್ಥಳಿಯ ಸಮರ್ಥ ವಿದ್ಯಾ ವಿಕಾಸ ವಿವಿದೊದ್ದೇಶಗಳ ಸಂಸ್ಥೆಯ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡಿ ಅವರು ಮಾತನಾಡಿದರು.
ಒಬ್ಬ ವ್ಯಕ್ತಿಯ ಸ್ವಭಾವ, ನಡವಳಿಕೆ, ಸಂದರ್ಭಕ್ಕೆ ಅನುಗುಣವಾಗಿ ಪ್ರತಿಕ್ರಿಯೆ ಹೀಗೆ ಎಲ್ಲವನ್ನು ತಿಳಿದುಕೊಳ್ಳಬೇಕು. ಇದನ್ನು ನಿತ್ಯದ ಜೀವನದಲ್ಲಿ ದಿನದಿಂದ ದಿನಕ್ಕೆ ತಿಳಿದುಕೊಳ್ಳುವುದಕ್ಕೆ ಸಾಧ್ಯವಾಗಲಿದೆ ಎಂದರು.
ಶಾಲೆಯ ಶಿಕ್ಷಕರ ಸತತ ಶ್ರಮ ಮತ್ತು ವಿದ್ಯಾಥರ್ಿಗಳ ಪರಿಶ್ರಮದಿಂದ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಶೇ. 100ರಷ್ಟಾಗಿದೆ. ಅಲ್ಲದೇ ಅವರಲ್ಲಿ 46 ವಿದ್ಯಾಥರ್ಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಅವರಿಗೆ ಇಂದು ಪುರಸ್ಕಾರ ಮಾಡಲಾಗುತ್ತಿದೆ. ಈ ಪುರಸ್ಕಾರ ಕಾರ್ಯಕ್ರಮದ ಮುಂಬರುವ ವಿದ್ಯಾಥರ್ಿಗಳಿಗೆ ಪ್ರೇರಣೆಯಾಗಿದೆ ಎಂದು ಹೇಳಿದರು.
ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಅಸ್ಕಿ ಮಾತನಾಡಿ, ಸಂಸ್ಥಯ ಆಡಳಿತ ಮಂಡಳಿಯ ಸಹಕಾರ, ಮಾರ್ಗದರ್ಶನದಿಂದ ಶಾಲೆ ಅಭಿವೃದ್ಧಿ ಹೊಂದುತ್ತಿದೆ. ಶಾಲೆಯಲ್ಲಿ ವಿದ್ಯಾಥರ್ಿಗಳಿಗೆ ಪಠ್ಯಪುಸ್ತಕ ಬೋಧನೆ ಜೊತೆಗೆ ಪಠ್ಯಪೂರಕ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲಾಗುತ್ತಿದೆ. ಇದರಿಂದ ವಿದ್ಯಾಥರ್ಿಗಳ ವ್ಯಕ್ತಿತ್ವ ರೂಪಿತವಾಗುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 46 ಪ್ರತಿಭಾವಂತ ವಿದ್ಯಾಥರ್ಿಗಳಿಗೆ ಪುರಸ್ಕಾರ ಮಾಡಲಾಯಿತು.
ಶಿಕ್ಷಕರು, ಪಾಲಕರು ಹಾಗೂ ವಿದ್ಯಾಥರ್ಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.