ಜಮಖಂಡಿ

ಪಂಚಪೀಠಗಳು ಮತ್ತು ಬಸವಣ್ಣನವರು ಸನಾತನ ಧರ್ಮದ ಅವಿಭಾಜ್ಯ ಅಂಗ: ಸಿ.ಟಿ. ರವಿ

ಪಂಚಪೀಠಗಳು ಮತ್ತು ಬಸವಣ್ಣನವರು ಸನಾತನ ಧರ್ಮದ ಅವಿಭಾಜ್ಯ ಅಂಗ: ಸಿ.ಟಿ. ರವಿ

ಲೋಕದರ್ಶನ ವರದಿ 

ಜಮಖಂಡಿ 15: ಪಂಚಪೀಠಗಳು ಮತ್ತು ಬಸವಣ್ಣನವರು ಸನಾತನ ಧರ್ಮದ ಅವಿಭಾಜ್ಯ ಅಂಗವಾಗಿದ್ದಾರೆ, ಅವರನ್ನು ಸನಾತನ ಧರ್ಮದಿಂದ ಪ್ರತ್ಯೇಕವಾಗಿ ನೋಡುವ ಪ್ರಯತ್ನಗಳು ಸಮಾಜದಲ್ಲಿ ನಡೆಯುತ್ತಿರುತ್ತವೆ ಅದನ್ನು ನೋಡಿ ನೋವು ಮತ್ತು ಸಿಟ್ಟು ಬರುತ್ತದೆ, ಧರ್ಮ ಮತ್ತು ಸಂಸ್ಕೃತಿಯ ಸಂರಕ್ಷಣೆಗಾಗಿ ಸಮಾಜ ಒಗ್ಗಟ್ಟಿನಿಂದ ಇರಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು. 

ನಗರದ ಕಡಪಟ್ಟಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಮಾನವ ಧರ್ಮ ಮಂಟಪದಲ್ಲಿ ನಡೆದ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಾಷೆ ಮತ್ತು ಜಾತಿಗಳು ವಿಭಿನ್ನವಾಗಿರಬಹುದು.

ಆದರೆ ನಮ್ಮ ಸಂಸ್ಕೃತಿ ಮತ್ತು ನೈತಿಕ ಮೌಲ್ಯಗಳು ಒಂದೇ ಆಗಿವೆ. ಸಮಾಜದಲ್ಲಿ ಒಗ್ಗಟ್ಟು ಇದ್ದಾಗ ಮಾತ್ರ ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಾಧ್ಯ. ಭಾರತವನ್ನು ತನ್ನ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯೊಂದಿಗೆ ಉಳಿಸಿಕೊಳ್ಳಬೇಕಾದರೆ ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು ಎಂದರು. 


ಸುದ್ದಿ ಓದಿ