ಕೇಂದ್ರ ಸಚಿವೆ ಹರ್ ಸಿಮ್ರತ್ ಸಿಂಗ್ ಕೌರ್ ರಾಜೀನಾಮೆ ರಾಷ್ಟ್ರಪತಿ ಅಂಗೀಕಾರ
ನವದೆಹಲಿ, ಸೆಪ್ಟೆಂಬರ್ 18: ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ್ದ ಆಹಾರ ಸಂಸ್ಕರಣ ಉದ್ಯಮ ಸಚಿವೆ ಸಚಿವೆ ಹರ್ ಸಿಮ್ರತ್ ಸಿಂಗ್ ಕೌರ್ ರಾಜೀನಾಮೆಯನ್ನು ಸ್ವೀಕರಿಸಿದ್ದು, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಹೆಚ್ಚುವರಿ ಹೊಣೆ ವಹಿಸಿ ಆದೇಶಿಸಿದ್ದಾರೆ.
ತಕ್ಷಣವೇ ಹರ್ ಸಿಮ್ರತ್ ಕೌರ್ ರಾಜೀನಾಮೆಯನ್ನು ಸ್ವೀಕರಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಲಹೆಯಂತೆ ಸಚಿವರ ರಾಜೀನಾಮೆಯನ್ನು ರಾಷ್ಟ್ರಪತಿ ಸ್ವೀಕರಿಸಿದ್ದಾರೆ.
ಆಹಾರ ಸಂಸ್ಕರಣ ಉದ್ಯಮಗಳ ಖಾತೆಯನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಹೆಚ್ಚುವರಿಯಾಗಿ ವಹಿಸುವಂತೆ ಪ್ರಧಾನಿ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿದ್ದರು.
ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ ಕೃಷಿ ಕ್ಷೇತ್ರ ಕುರಿತಾದ ಮೂರು ವಿದೇಯಕಗಳನ್ನು ವಿರೋಧಿಸಿ ಎನ್ ಡಿ ಎ ಅಂಗ ಪಕ್ಷ ಶಿರೋಮಣಿ ಅಕಾಲಿ ದಳ ಪಕ್ಷದ ಸಚಿವೆ ಹರ್ ಸಿಮ್ರತ್ ಕೌರ್ ಗುರುವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ರೈತ ವಿರೋಧಿ ಸುಗ್ರೀವಾಜ್ಞೆಗಳನ್ನು ವಿರೋಧಿ ಸುಗ್ರೀವಾಜ್ಞೆ ಹಾಗೂ ಶಾಸನ ವಿರೋಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರೈತರ ಮಗಳಾಗಿ, ಸಹೋದರಿಯಾಗಿ ಅವರ ಪರ ನಿಲ್ಲುವುದು ಹೆಮ್ಮೆಯ ಸಂಗತಿ ಎಂದು ಹರ್ ಸಿಮ್ರತ್ ಸಿಂಗ್ ಕೌರ್ ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದರು.