ತಿರುಪತಿ ತಲುಪಿದ ರಾಷ್ಟ್ರಪತಿ; ಗಣ್ಯರಿಂದ ಸ್ವಾಗತ
ತಿರುಪತಿ,
ನವೆಂಬರ್ 24: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ವಿಶೇಷ ಭಾರತೀಯ
ವಾಯುಪಡೆಯ ವಿಮಾನದಲ್ಲಿ ಆಂಧ್ರಪ್ರದೇಶದ ರೇಣಿಗುಂಟ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಕೋವಿಂದ್ ಮತ್ತು ಕುಟುಂಬ ಸದಸ್ಯರು ತಿರುಮಲ ದೇಗುಲದ ವೆಂಕಟೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದಾರೆ.
ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಾಭೂಷಣ್ ಹರಿಚಂದನ್, ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ, ಟಿಟಿಡಿ ಅಧ್ಯಕ್ಷ ವೈ ವಿ ಸುಬ್ಬಾ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಯನ್ನು ಸ್ವಾಗತಿಸಿದರು.
ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ತಿರುಮಲಕ್ಕೆ ತೆರಳುವ ಮುನ್ನ ರಾಷ್ಟ್ರಪತಿಗಳು ಇಲ್ಲಿನ ತಿರುಚನೂರಿನ ಪದ್ಮಾವತಿ ದೇವಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ದರ್ಶನದ ನಂತರ ಕೋವಿಂದ್ ರೆನಿಗುಂಟಾ ವಿಮಾನ ನಿಲ್ದಾಣದಿಂದ ವಿಶೇಷ ವಾಯುಪಡೆಯ ವಿಮಾನದಲ್ಲಿ ಅಹಮದಾಬಾದ್‌ಗೆ ತೆರಳಲಿದ್ದಾರೆ.