ರಾಷ್ಟ್ರೀಯ

ತಮಿಳುನಾಡು, ಪುದುಚೇರಿಗೆ ಅಗತ್ಯ ನೆರವು , ಪ್ರಧಾನಿ ಭರವಸೆ

ತಮಿಳುನಾಡು, ಪುದುಚೇರಿಗೆ  ಅಗತ್ಯ ನೆರವು , ಪ್ರಧಾನಿ ಭರವಸೆ

ಚೆನ್ನೈ, ನ 24: ತಮಿಳುನಾಡು, ಆಂಧ್ರಪ್ರದೇಶಕ್ಕೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

 

ಸಂಕಷ್ಟ ನಿವಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮಿಳುನಾಡು ಮತ್ತು ಪುದುಚೇರಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದು, ಸಂಪೂರ್ಣ ಸಹಾಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. 

 

ನಿವಾರ್ ಚಂಡಮಾರುತವು ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗುತ್ತಿದ್ದು, ಪರಿಣಾಮ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ಅನೇಕ ಕಡೆ ಭಾರಿ ಮಳೆ ಯಾಗಲಿದೆ.

ಇದೇ   25ರಂದು ಕಾರೈಕಲ್  ಪುದುಚೆರಿಯಲ್ಲಿ, . 25 ಮತ್ತು 26ರಂದು ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಮತ್ತು ರಾಯಲಸೀಮಾ  ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಸುವ ಸಂಭವವಿದೆ. ವಿಶಾಖಪಟ್ಟಣಂ ಮತ್ತು ಪೂರ್ವ ಗೋದಾವರಿ ಜಿಲ್ಲೆಯಲ್ಲಿಯೂ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 

ಪ್ರಸ್ತುತ ನಿವಾರ್ ಚಂಡಮಾರುತವು ಶ್ರೀಲಂಕಾದ ಉತ್ತರ ಭಾಗ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯತ್ತ ಪಶ್ಚಿಮದಿಂದ ಚಲಿಸುತ್ತಿದೆ. ಹೀಗಾಗಿ ಈ ಭಾಗಗಳಲ್ಲಿ ನಾಳಿದ್ದರವರೆಗೂ ಮಳೆಯಾಗುವ ಸಾಧ್ಯತೆಯಿದೆ. 

ಸುದ್ದಿ ಓದಿ