ಪ್ರವಾದಿಯವರು ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ ಮಹಾನ್ ಶಾಂತಿಧೂತ
The Prophet was a great messenger of peace who brought a message of equality to the world
ಗಜೇಂದ್ರಗಡ 23: ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರು ಮನುಕುಲದ ಉದ್ಧಾರಕ್ಕಾಗಿ ಶ್ರಮಿಸಿದ ಮಹಾನ್ ಮಾನವತಾವಾದಿಯಾಗಿದ್ದು, ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ್ದಾರೆ ಎಂದು ಪುರಸಭೆ ಸದಸ್ಯ ಶಿವರಾಜ್ ಘೋರೆ್ಡ ಹೇಳಿದರು.
ನಗರದ ಟೆಕ್ಕದ ದರ್ಗಾದಲ್ಲಿ ಈದ್ ಮೀಲಾದುನ್ನಬೀ ಪ್ರಯುಕ್ತ ಆಯೋಜಿಸಿದ್ದ ಮಕ್ಕಳ ಧಾರ್ಮಿಕ ನಾಥ್ ಬಯಾನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಪ್ರವಾದಿ ಮುಹಮ್ಮದ್ ಪೈಗಂಬರ್ ಅವರು ಎಲ್ಲರನ್ನು ಸಮಾನವಾಗಿ ಕಾಣುವ ಮೂಲಕ ಸೌಹಾರ್ದತೆಯ ಸಂದೇಶ ನೀಡಿದವರು ಎಂದರು. ಪ್ರಾಸ್ತಾವಿಕವಾಗಿ ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಮಾತನಾಡಿ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರು ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಟ ನಡೆಸಿದ ವಿಶ್ವದ ಮಹಾನ್ ನಾಯಕರಾಗಿದ್ದು ಅಸಮಾನತೆ, ಗುಲಾಮಗಿರಿ ವಿರುದ್ಧ ಸಮರ ಸಾರಿದ ಜಗತ್ತಿನ ಸರ್ವಶ್ರೇಷ್ಠ ಸಮಾಜ ಸುಧಾಕರು ಎಂದರು.
60 ಕ್ಕೂ ಹೆಚ್ಚು ಮಕ್ಕಳು ನಾಥ್ ಬಯಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದಿವ್ಯ ಸಾನಿಧ್ಯ ವಹಿಸಿದ ಟೆಕ್ಕದ ದರ್ಗಾದ ಹಜರತ್ ನಿಜಾಮುದ್ದಿನಷಾ ಅಶ್ರಫಿ ಮಕಾನದಾರ ಆಶಿರ್ವಚನ ನೀಡಿದರು. ಅಂಜುಮನ್ ಇಸ್ಲಾಂ ಕಮೀಟಿ ಚೇರಮನ್ನ ಹಸನಸಾಬ ತಟಗಾರ, ಎ ಡಿ ಕೋಲಕಾರ ಮಾತನಾಡಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 