ತುರ್ತು ಪರಿಸ್ಥಿತಿಯಲ್ಲಿ ಜನರ ಪ್ರಾಣ ಉಳಿಸುವ ರೆಡ್‌ಕ್ರಾಸ್ ಸೇವೆ ಶ್ಲಾಘನೀಯ
The Red Cross service that saves lives in emergencies is commendable
ಬಳ್ಳಾರಿ 12: ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರ ಆಸ್ತಿ ಮತ್ತು ಪ್ರಾಣವನ್ನು ರಕ್ಷಿಸುವ ಮೂಲಕ ರೆಡ್‌ಕ್ರಾಸ್ ಸಂಸ್ಥೆಯ ಸಿಬ್ಬಂದಿ ಮಾಡುತ್ತಿರುವ ಮಾನವೀಯ ಸೇವೆ ಅತ್ಯಂತ ಸಂತೋಷ ತರುವಂತಹದ್ದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಶ್ಲಾಘಿಸಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಬಳ್ಳಾರಿ ಶಾಖೆ ಹಾಗೂ ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಹಳೆಯ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ವಿಶ್ವ ರೆಡ್‌ಕ್ರಾಸ್ ದಿನಾಚಾರಣೆ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ರೆಡ್‌ಕ್ರಾಸ್ ಸಂಸ್ಥೆಯ ಉದಾತ್ತ ಧ್ಯೇಯೋದ್ದೇಶಗಳು ಮತ್ತು ಸಮಾಜಮುಖಿ ಕಾರ್ಯಗಳು ಅನನ್ಯವಾಗಿವೆ ಎಂದರು.
ರೆಡ್‌ಕ್ರಾಸ್ ಸಂಸ್ಥೆಯ ಈ.ಸಿ ಸದಸ್ಯ ಡಾ.ನಾಗರಾಜ್‌ರಾವ್ ಅವರು ಮಾತನಾಡಿ, ದಿನನಿತ್ಯದ ಸಾರ್ವಜನಿಕ ಕೆಲಸ ಕಾರ್ಯಗಳಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿ ಎದುರಿಸುವ ಮಾನಸಿಕ ಒತ್ತಡವನ್ನು ನಿವಾರಿಸಲು ಯೋಗ, ಪ್ರಾಣಾಯಾಮ ಮತ್ತು ಉತ್ತಮ ಜೀವನಶೈಲಿಯ ಅಭ್ಯಾಸಗಳು ಅತ್ಯಂತ ಪರಿಣಾಮಕಾರಿ ಎಂದು ಅವರು ಸವಿಸ್ತಾರವಾಗಿ ವಿವರಿಸಿದರು. ಇದೇ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರೆಡ್‌ಕ್ರಾಸ್ ಸಂಸ್ಥೆಯ ಸ್ವಯಂ ಸೇವಕರಿಗೆ ಮುಖ್ಯ ಅತಿಥಿಗಳಿಂದ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು. ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎ.ಷಕೀಬ್ ಅವರು ನಿರೂಪಿಸಿದರು.ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಖಜಾಂಚಿ ಪೊಲಾ ರಾಧಾಕೃಷ್ಣ, ಈ.ಸಿ. ಸದಸ್ಯ ಪ್ರೊ. ಕುಪ್ಪಗಲ್ಲು ವೀರೇಶ್ ಹಾಗೂ ಬಳ್ಳಾರಿ ರೆಡ್‌ಕ್ರಾಸ್ ಸಂಸ್ಥೆಯ ಅಜೀವ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 