ವಿಜಯಪುರ

ವಿಜಯಪುರ ಜಿಲ್ಲೆಗೆ 371(ಜೆ )ಮೀಸಲಾತಿ ರಾಜ್ಯ ಸರಕಾರ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಬೇಕು-ಎಸ್ ಕೆ ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಗೆ 371(ಜೆ )ಮೀಸಲಾತಿ ರಾಜ್ಯ ಸರಕಾರ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಬೇಕು-ಎಸ್ ಕೆ ಬೆಳ್ಳುಬ್ಬಿ
The State Government must submit a proposal to the Centre regarding 371(J) reservation for Vijayapur


ವಿಜಯಪುರ 22: ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಕೈಬಿಟ್ಟಿದ್ದಕ್ಕೆ ದೊಡ್ಡ ಅನ್ಯಾಯವಾಗಿದೆ, ಕೂಡಲೇ ರಾಜ್ಯ ಸರಕಾರ ಜಿಲ್ಲೆಗೆ ಮೀಸಲಾತಿ ಒದಗಿಸಲು ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿಕೊಟ್ಟು ಜಿಲ್ಲೆಯ ಜನರಿಗೆ ನ್ಯಾಯ ಒದಗಿಸಬೇಕೆಂದು ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಸರಕಾರಕ್ಕೆ ಆಗ್ರಹಿಸಿದರು. ಅವರು ಕೊಲ್ಹಾರ ಪಟ್ಟಣದಲ್ಲಿ ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಹೋರಾಟ ಕುರಿತು ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿಯಿಂದ ಹಮ್ಮಿಕೊಂಡಿದ್ದ  ಜನಜಾಗೃತಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ಮಕ್ಕಳಿಗೆ ಶಿಕ್ಷಣ ಮತ್ತು ಯುವಜನರಿಗೆ ಉದ್ಯೋಗಾವಕಾಶಕ್ಕಾಗಿ 371(ಜೆ) ಮೀಸಲಾತಿ ಅತ್ಯಂತ ಅವಶ್ಯಕವಾಗಿದೆ, ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿಯ ಹೋರಾಟಕ್ಕೆ  ಬೆಂಬಲಿಸುತ್ತೇನೆ ಎಂದು ಹೇಳಿದ ಅವರು ಬಸವನಬಾಗೇವಾಡಿ, ಕೋಲ್ಹಾರ, ನಿಡಗುಂದಿ ತಾಲೂಕು ಸೇರಿದಂತೆ ಜಿಲ್ಲೆಯ ಜನ ಹೋರಾಟಕ್ಕೆ ಬೆಂಬಲಿಸಬೇಕೆಂದರು. ಹೋರಾಟ ಸಮಿತಿಯ ಮುಖಂಡ ಅನಿಲ ಇಕ್ಕಡೆ ಅವರು 371(ಜೆ) ಮೀಸಲಾತಿಯಿಂದ ವಿಜಯಪುರ ಜಿಲ್ಲೆಯನ್ನು ಕೈಬಿಟ್ಟಿದ್ದಕ್ಕೆ ಜಿಲ್ಲೆಯ ಅಭಿವೃದ್ಧಿ ಕುಂಟಿತತವಾಗಿದೆ,

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರತಿಯೊಬ್ಬರು ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿಯಿಂದ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಬೆಳ್ಳುಬ್ಬಿ, ಪ್ರಶಾಂತ ಪವಾರ, ಜಿ ಆರ್ ನ್ಯಾಮಗೌಡ ಓಂಕಾರ​‍್ಪಗೌಡ ಪಾಟೀಲ ಇಸ್ಮಾಯಿಲ್ ತಹಸೀಲ್ದಾರ, ಅಪ್ಪುಗೌಡ ಪಾಟೀಲ ಸೇರಿದಂತೆ ನೂರಾರು ಜನ ಉಪಸ್ಥಿತರಿದ್ದರು. 


ಸುದ್ದಿ ಓದಿ